ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು, ಶಾಲಾ ಶತಮಾನೋತ್ಸವ ಸಮಿತಿ, ಶಾಲಾ ಶಿಕ್ಷಕ-ರಕ್ಷಕ ಸಂಘ, ಶ್ರೀ ಧರ್ಮಸ್ಥಳ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಹ ಯೋಗದಲ್ಲಿ ಶ್ರೀ ಜನಾರ್ದನ ಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ ಸೆ. 8ರಂದು ಶ್ರೀ ಧರ್ಮಸ್ಥಳ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ, ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಉದ್ಘಾಟಿಸಿ ಜನಾರ್ದನ ಸ್ವಾಮಿ ನೇವಾಟ್ರಸ್ಟ್ ವತಿಯಿಂದ ಪ್ರತಿವರ್ಷ ವಿದ್ಯಾರ್ಥಿಗಳಿಗೆ ವಿತರಿಸುತ್ತಿರುವ ಉಚಿತ ಸಮವಸ್ತ್ರ ವಿದ್ಯೆಯ ಅರಿವನ್ನು ಹೊಂದಿ ಸಮಾಜದಲ್ಲಿ ಉತ್ತಮ ವ್ಯಕ್ತಿತ್ವವದೊಂದಿಗೆ ಮುಂದೆ ತಾವು ಕಲಿತ ವಿದ್ಯಾ ಸಂಸ್ಥೆಗೆ, ಸಮಾಜಕ್ಕೆ, ಸೆತ್ತವರಿಗೆ ಕೀರ್ತಿ ತರುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ತುಂಬಾ ಅರ್ಥಪೂರ್ಣವಾಗಿದೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಶರತ್ ಕೃಷ್ಣ ಪಡುವೆಟ್ನಾಯ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಮುಂದಿನ ಜೀವನದಲ್ಲಿ ಇಂತಹ ಸಮಾಜ ಮುಖಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದರ ಮುಖಾಂತರ ತಮ್ಮ ಋಣವನ್ನು ತೀರಿಸಬೇಕೆಂದು ವಿದ್ಯಾರ್ಥಿಗಳಲ್ಲಿ ವಿನಂತಿಸಿಕೊಂಡರು.
ಮುಖ್ಯ ಅತಿಥಿಗಳಾಗಿ ಶತಮಾನೋತ್ಸವ ಸಮಿತಿಯ ಕಾರ್ಯದರ್ಶಿ ಅಬೂಬಕ್ಕರ್, ಶತಮಾನೋತ್ಸವ ಸಮಿತಿಯ ಕಾರ್ಯಕ್ರಮ ಸಂಯೋಜಕ ಸೋಮಶೇಖರ್ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾರ್, ಮುಖ್ಯೋಪಾಧ್ಯಾಯ ಬಾಲಕೃಷ್ಣ ನಾಯ್ಕ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಅಬೂಬಕ್ಕರ್, ಉಪಾಧ್ಯಕ್ಷೆ ಪ್ರತಿಯಾ, ನಿವೃತ್ತ ಮುಖ್ಯಶಿಕ್ಷಕ ಕೃಷ್ಣಪ್ಪ ಪೂಜಾರಿ, ನಿವೃತ್ತ ಸಹ ಶಿಕ್ಷಕಿ ಬಿ. ವಿಜಯಲಕ್ಷ್ಮಿ ಉಪಸ್ಥಿತರಿದ್ದರು. ಶಾಲೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದ ನಿವೃತ್ತ ಮುಖ್ಯೋಪಾಧ್ಯಯ ಕೃಷ್ಣಪ್ಪ ಪೂಜಾರಿ, ಸಹ ಶಿಕ್ಷಕಿ ಬಿ. ವಿಜಯ ಲಕ್ಷ್ಮಿ ರವರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮವು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತು. ಸಹ ಶಿಕ್ಷಕ ಕೂಸಪ್ಪ ಗೌಡ ಸ್ವಾಗತಿಸಿದರು. ಪುಷ್ಪಾವತಿ ವಿದ್ಯಾರ್ಥಿಗಳ ಸಮವಸ್ತ್ರ ವಿತರಣಾ ಪಟ್ಟಿ ವಾಚಿಸಿದರು. ಸನ್ಮಾನಿತರ ಸನ್ಮಾನ ಪತ್ರವನ್ನು ಸಮತಾ ಮತ್ತು ಸುಜಾತ ವಾಚಿಸಿದರು. ದೈಹಿಕ ಶಿಕ್ಷಕ ಗಿರೀಶ್ ರವರು ಕಾರ್ಯಕ್ರಮ ನಿರೂಪಿಸಿದರು. ಮುಖ್ಯಶಿಕ್ಷಕ ಬಾಲಕೃಷ್ಣ ನಾಯ್ಕ ಅವರು ಧನ್ಯವಾದ ನೀಡಿದರು.