


ಧರ್ಮಸ್ಥಳ: ಗ್ರಾಮ ಪಂಚಾಯತಿನ 2025- 26ನೇ ಸಾಲಿನ ಮೊದಲ ಗ್ರಾಮ ಸಭೆಯು ಸೆ. 9ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.



ಮಾರ್ಗದರ್ಶಿ ಅಧಿಕಾರಿಯಾಗಿ ನೀರು ಮತ್ತು ನೈರ್ಮಲ್ಯ ಇಲಾಖೆ ಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿಜಯ ಕುಮಾರ್ ಸಭೆಯನ್ನು ಮುನ್ನಡೆಸಿದರು. ಪಂಚಾಯತ್ ಉಪಾಧ್ಯಕ್ಷ ಪಿ. ಶ್ರೀನಿವಾಸ ರಾವ್ ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ. ಸ್ವಾಗತಿಸಿದರು. ಲೆಕ್ಕ ಸಹಾಯಕಿ ಪ್ರಮೀಳಾ ಜಮಾ ಖರ್ಚು ವಾಚಿಸಿದರು. ಸಿಬ್ಬಂದಿ ವಂದನಾ ಬಳ್ಳಾಲ್ ವರದಿ ವಾಚಿಸಿದರು. ಸಿಬ್ಬಂದಿ
ಡಾ. ದೇವಿಪ್ರಸಾದ್ ಬೊಲ್ಮ ಕಾರ್ಯಕ್ರಮ ನಿರೂಪಿಸಿದರು ಇತರ ಸಿಬ್ಬಂದಿಗಳು ಸಹಕರಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.










