ಉಜಿರೆ: ಸಾಹಿತ್ಯವು ವಿದ್ಯಾರ್ಥಿಯ ಭವಿಷ್ಯವನ್ನು ರೂಪಿಸುತ್ತದೆ. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ದೆಸೆಯಿಂದಲೇ ಓದು ಹಾಗು ಬರವಣಿಗೆಯ ಕಲೆಯನ್ನು ಬೆಳೆಸಿಕೊಳ್ಳಬೇಕು. ಸಾಹಿತ್ಯದ ಅಭಿರುಚಿಯು ನಮ್ಮ ಸುಂದರ ಜೀವನಕ್ಕೆ ಅಡಿಪಾಯವಿದಂತೆ ಎಂದು ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತನ ಅಧ್ಯಕ್ಷ ಡಿ. ಯದುಪತಿ ಗೌಡ ಹೇಳಿದರು.
ಅವರು ಸೆ.9ರಂದು ಉಚಿರ ಅನುಗ್ರಹ ಪದವಿಪೂರ್ವ ಕಾಲೇಜಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ ಹಾಗೂ ಕಾಲೇಜಿನ ಕನ್ನಡ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಉಪನ್ಯಾಸ ಮಾಲೆಯ ಪ್ರಯುಕ್ತ ಗಿರೀಶ್ ಕಾರ್ನಡ್ ಅವರ ಕುರಿತು ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಜಿರೆ ಎಸ್.ಡಿ.ಎಮ್ ಕಾಲೇಜಿನ (ಸ್ವಾಯತ್ತ) ಕನ್ನಡ ಸಹಾಯಕ ಪ್ರಾಧ್ಯಾಪಕಿ ಭವ್ಯಶ್ರೀ ಆರ್. ಬಲ್ಲಾಳ್ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಮಾತನಾಡುತ್ತ ಗಿರೀಶ್ ಕಾರ್ನಡ್ ಮಹಾನ್ ಪ್ರತಿಭೆ ಕನ್ನಡ ಭಾಷೆಯನ್ನು ಕನ್ನಡ ಸಂಸ್ಕೃತಿಯನ್ನು ಪ್ರಪಂಚಕ್ಕೆ ಪರಿಚಯಿಸಿದ ಹೆಗ್ಗಳಿಕೆ ಇವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಫಾ.ವಿಜಯ್ ಲೋಬೋ ಪ್ರಾಸ್ತಾವಿಕವಾಗಿ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಬೆಳ್ತಂಗಡಿ ತಾಲೂಕು ಘಟಕದ ಕಾರ್ಯವೈಕರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಲೇಜು ಕನ್ನಡ ಸಂಘದ ಜೊತೆ ಕಾರ್ಯದರ್ಶಿ ವಿದ್ಯಾರ್ಥಿ ಕ್ರಿಸ್ಟಿನ್ ಜೋನ್ ಅಥಿತಿ ಪರಿಚಯ ಮಾಡಿದರು. ಕನ್ನಡ ಉಪನ್ಯಾಸಕ ಅರುಣ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.