ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯಿಂದ ಅಂಡಿಂಜೆ ಗ್ರಾಮದ ಬೂತ್ ಪ್ರಗತಿ ಸಭೆಯು ಕೊಕ್ರಾಡಿಯಲ್ಲಿ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಬೂತ್ ಮಟ್ಟದಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಕಾರ್ಯಕ್ರಮಗಳನ್ನು ನಡೆಸುವುದು ಮತ್ತು ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸ್ಪಂದಿಸುವ ಬಗ್ಗೆ ಮಾಹಿತಿಯನ್ನು ನೀಡಿದರು.

ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯನ್ ಮಾಲಾಡಿ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೆಡಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನ ಭಂಡಾರಿ, ಗ್ರಾಮ ಪಂಚಾಯತ್ ಸದಸ್ಯ ಪರಮೇಶ್ವರ, ಸೇವಾ ಸಹಕಾರಿ ಸಂಘದ ನಿರ್ದೇಶಕ ವಿಠ್ಠಲ್ ಪೂಜಾರಿ ಸಾವ್ಯ, ಮಾಜಿ ನಿರ್ದೇಶಕರಾದ ಪಾರ್ಶ್ವನಾಥ್ ಭಂಗ, ಲಕ್ಷ್ಮಣ ಪೂಜಾರಿ, ಪಂಚಾಯತ್ ಸಮಿತಿಯ ಅಧ್ಯಕ್ಷ ಸೂರ್ಯನಾರಾಯಣ ಡಿ.ಕೆ., ಗ್ರಾಮ ಸಮಿತಿಯ ಅಧ್ಯಕ್ಷ ಸುರೇಂದ್ರ ಕೋಟ್ಯಾನ್ ಕೊಕ್ರಾಡಿ, ದಿನೇಶ್ ಸಾವ್ಯ, ಸುದರ್ಶನ್ ಭಂಡಾರಿ ಅಂಡಿಂಜೆ, ಬೆಳ್ತಂಗಡಿ, ಮಂಜಪ್ಪ ಪೂಜಾರಿ ಕೊಕ್ರಾಡಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಮಹಮ್ಮದ್ ಶಾಫಿ ಕಾಶಿಪಟ್ಟಣ, ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಶೆಟ್ಟಿ ಕೊಕ್ರಡಿ, ಭೂ ಅಭಿವೃದ್ಧಿ ಬ್ಯಾಂಕಿನ ನಿರ್ದೇಶಕ ಶುಭಕರ್ ಸಾವ್ಯ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಆನಂದ ನೆಲ್ಲಿಂಗೇರಿ ಹಾಗೂ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು, ಸದಸ್ಯರು, ಪಕ್ಷದ ಗ್ರಾಮ ಸಮಿತಿ ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.