ಉಜಿರೆ: ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸಂಧಿವಾತ, ಅಟೋ ಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರ

0

ಉಜಿರೆ: ಹೆಗ್ಗಡೆ ಹಾಗೂ ಹೇಮಾವತಿ ವಿ. ಹೆಗ್ಗಡೆ ಅವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸಂಧಿವಾತ ಮತ್ತು ಆಟೋ ಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರವನ್ನು ನಡೆಸಲಾಯಿತು.

ಈ ಶಿಬಿರದಲ್ಲಿ ಖ್ಯಾತ ಸಂಧಿವಾತ ತಜ್ಞೆ ಡಾ. ಆಶ್ವಿನಿ ಕಾಮತ್ ಭಾಗವಹಿಸಿ ರೋಗಿಗಳ ತಪಾಸಣೆ ನಡೆಸಿದರು. ಸಂಧಿವಾತ, ಅಸ್ಥಿ ಸಂಧಿವಾತ, ಮಕ್ಕಳ ಸಂಧಿವಾತ, ರುಮಟಾಯ್. ಆರ್ಥೈಟಿಸ್, ಸ್ಟಾಂಡಿಲೋ ಆರ್ಥೈಟಿಸ್, ಸಿಸ್ಟಮಿಕ್ ಲೂಪಸ್ ಎರಿಥೆಮಾಟೋಸಸ್, ಸೋರಿಯಾಸಿಸ್, ವಾಸ್ಕುಲೈಟಿಸ್ ಮುಂತಾದ ತೊಂದರೆಗಳಿಂದ ಬಳಲುತ್ತಿರುವವರು ಈ ಶಿಬಿರದಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಂಡರು.

ಈ ಶಿಬಿರದಲ್ಲಿ ಉಚಿತ ಸಮಾಲೋಚನೆಯ ಜತೆಗೆ ರಕ್ತ ಪರೀಕ್ಷೆಗೆ 20% ಹಾಗೂ ಔಷಧಗಳಿಗೆ 10% ರಿಯಾಯಿತಿಯನ್ನು ನೀಡಲಾಯಿತು.

LEAVE A REPLY

Please enter your comment!
Please enter your name here