ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಬಳಂಜ, ನಾಲ್ಕೂರು, ತೆಂಕಕಾರಂದೂರು ಇವುಗಳ ಜಂಟಿ ಆಶ್ರಯದಲ್ಲಿ ಸೆ.9ರಂದು ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಶ್ರೀ ನಾರಾಯಣ ಗುರುಗಳ 171ನೇ ಗುರು ಜಯಂತಿ ಆಚರಣೆ ಹಾಗೂ ಸಂಘದ ನೂತನ ಆಡಳಿತ ಮಂಡಳಿಯ ಪದ ಪ್ರಧಾನ ಕಾರ್ಯಕ್ರಮ ನಡೆಯಿತು.
ರಘುನಾಥ ಶಾಂತಿಯವರ ನೇತೃತ್ವದಲ್ಲಿ ಗುರು ಪೂಜೆ, ಪಂಚಶ್ರೀ ಮಹಿಳಾ ಭಜನಾ ಮಂಡಳಿ ಸದಸ್ಯರಿಂದ ಗುರು ಸ್ತೋತ್ರ ಮತ್ತು ಭಜನೆ ನಡೆಯಿತು. ತದನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾಗಿ ಪುನಾರಾಯ್ಕೆಗೊಂಡ ಸಂತೋಷ್ ಕೋಟ್ಯಾನ್ ಅವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ ತಾಲೂಕು ಘಟಕದ ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು ನೆರವೇರಿಸಿ ಬಳಂಜ ಬಿಲ್ಲವ ಸಂಘದ ಸೇವಾ ಚಟುವಟಿಕೆಗಳು ಜಿಲ್ಲೆಗೆಮಾದರಿಯಾಗಿದ್ದು ಇವರ ಸೇವೆಯನ್ನು ಗುರುತಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದು ಅಭಿನಂದನೀಯ ಎಂದು ಶುಭವನ್ನು ಹಾರೈಸಿದರು.
ಗುರುದೇವ ವಿವಿಧ್ದೋದ್ದೆಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಥ್ ಕುಮಾರ್ ಅವರು ಗುರು ಸಂದೇಶ ನೀಡಿ,ಬಿಲ್ಲವ ಸಮಾಜದ ಯುವ ಜನತೆ ದುಷ್ಟಟಗಳಿಂದ ದೂರ ನಿಂತು ಉತ್ತಮ ವಿದ್ಯಾಭ್ಯಾಸದ ಜೊತೆಗೆ ಸಮಾಜಮುಖಿ ಸೇವೆಯಲ್ಲಿಯೂ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ನೂತನ ಆಡಳಿತ ಮಂಡಳಿಯ ಪದ ಪ್ರಧಾನ ಮತ್ತು ಪ್ರಮಾಣ ವಚನ ಸ್ವೀಕರಿಸಿ ಮಾತನಾಡಿದ ಸಂಘದ ಕ್ರಿಯಾಶೀಲ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಅವರು ಸಂಘದ ಮುಂದಿನ ಕಾರ್ಯಚಟುವಟಿಕೆಗಳ ಕುರಿತು ಮಾತನಾಡಿ ನೂತನ ಅಡುಗೆ ಕೋಣೆಯ ನಿರ್ಮಾಣಕ್ಕೆ ಶಾಸಕರ ನಿಧಿ ಮಂಜೂರುಗೊಂಡಿದ್ದು ಕೆಲಸ ಪ್ರಗತಿಯಲ್ಲಿದ್ದು ಎಲ್ಲರ ಸಹಕಾರವನ್ನು ಕೋರಿದರು.
ಸಂಘದ ನಿಕಟಪೂರ್ವ ಕಾರ್ಯದರ್ಶಿ ಜಗದೀಶ ಬಲ್ಲಿದಡ್ದ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷ ಭಾರತಿ ಸಂತೋಷ್ ಸಂಘದ ಪ್ರಧಾನ ಕಾರ್ಯದರ್ಶಿ ರಂಜಿತ್ ಮಜಲಡ್ಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಿಲ್ಲವ ಮಹಿಳಾ ವೇದಿಕೆ ಮಾಜಿ ಅಧ್ಯಕ್ಷೆ ಪುಷ್ಪಾ ಗಿರೀಶ್ ಪ್ರಾರ್ಥನೆ ಹಾಡಿದರು. ಸಂಘದ ಕೋಶಾಧಿಕಾರಿ ಪ್ರವೀಣ್ ಕುಮಾರ್ ಎಚ್.ಎಸ್. ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು. ಸಂಘದ ಮಾಜಿ ಕಾರ್ಯದರ್ಶಿ ಸದಾನಂದ ಸಾಲಿಯಾನ್ ಬಳಂಜ ಕಾರ್ಯಕ್ರಮ ನಿರೂಪಿಸಿದರು. ಸಂಘದ ಮಾಜಿ ಅಧ್ಯಕ್ಷರು, ನಿರ್ದೇಶಕರು, ಮಹಿಳಾ ಸದಸ್ಯರು, ಯುವ ಬಿಲ್ಲವ ವೇದಿಕೆ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.