Site icon Suddi Belthangady

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನವನ್ನು ಸೆ.10ರಂದು ಹರ್ಷೋದ್ಗಾರದಿಂದ ಆಚರಿಸಲಾಯಿತು. ಸಂಸ್ಥೆಯ ವಿದ್ಯಾರ್ಥಿಗಳು ಶಿಕ್ಷಕರಿಗೆ ಗೌರವ ಸಲ್ಲಿಸಿದರು.

ಶಿಕ್ಷಕರ ದಿನದ ಅಂಗವಾಗಿ ವಿದ್ಯಾರ್ಥಿಗಳಿಂದ ಕ್ರೀಡಾ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉತ್ಸಾಹದಿಂದ ಪಾಲ್ಗೊಂಡು ದಿನವನ್ನು ಸ್ಮರಣೀಯವಾಗಿಸಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರು, ಸಂಯೋಜಕರು, ಭೋಧಕ ಹಾಗೂ ಭೋಧಕೇತರ ವೃಂದದವರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕರ ಸೇವೆ ಹಾಗೂ ತ್ಯಾಗವನ್ನು ಸ್ಮರಿಸಿ ದಿನವನ್ನು ಹರ್ಷಭರಿತವಾಗಿ ಆಚರಿಸಲಾಯಿತು.

Exit mobile version