ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ದಕ್ಷಿಣ ಕನ್ನಡ ಜಿಲ್ಲೆ ಇವರು ಸೆ. 11ರಂದು ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸಿದ ತಾಲೂಕು ಮಟ್ಟದ “ನನ್ನ ಮತ ನನ್ನ ಹಕ್ಕು” ಎಂಬ ವಿಷಯದಲ್ಲಿ ನಡೆಸಿದ ಭಾಷಣ ಸ್ಪರ್ಧೆಯಲ್ಲಿ ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅಧ್ಯಯನ ಮಾಡುತ್ತಿರುವ ಆಫ್ರಾ ಫಿರ್ದಸ್ಸ್ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಗೆ ಸಂಸ್ಥೆಯ ಅಧ್ಯಕ್ಷೆ ಪ್ರೀತಿತಾ ಧರ್ಮ ವಿಜೇತ್ ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.
Home ಕ್ರೀಡೆ ನ್ಯೂಸ್ ಭಾಷಣ ಸ್ಪರ್ಧೆ: ಬೆಳ್ತಂಗಡಿ ಶ್ರೀ ಗುರುದೇವ ಪ.ಪೂ. ಕಾಲೇಜು ವಿದ್ಯಾರ್ಥಿನಿ ಆಫ್ರಾ ಫಿರ್ದುಸ್ ಜಿಲ್ಲಾ ಮಟ್ಟಕ್ಕೆ...