ಉಜಿರೆ: ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ವ್ಯುತ್ಪತ್ತಿ ಸಂಘದಿಂದ ವಿಶ್ವ ಆತ್ಮಹತ್ಯೆ ತಡೆ ದಿನದ ಪ್ರಯುಕ್ತ ಮಾಹಿತಿ ಹಾಗೂ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿ ವರ್ಷ ಸೆ. 10ರಂದು ನಡೆಸಲ್ಪಡುವ ಈ ಕಾರ್ಯಕ್ರಮದ ಉದ್ದೇಶ ಆತ್ಮಹತ್ಯೆ ಪ್ರಕರಣಗಳನ್ನು ತಡೆಯುವುದು, ಜಾಗೃತಿ ಮೂಡಿಸುವುದು ಹಾಗೂ ಸಹಾನುಭೂತಿ ಬೆಳೆಸುವುದು ಆಗಿದೆ.
ವಿಶ್ವ ಆರೋಗ್ಯ ಸಂಸ್ಥೆ ಮತ್ತು ಇಂಟರ್ನ್ಯಾಷನಲ್ ಅಸೋಸಿಯೇಶನ್ ಫಾರ್ ಸುಸೈಡ್ ಪ್ರಿವೆನ್ಷನ್ನ ಆಶ್ರಯದಲ್ಲಿ ವಿಶ್ವಾದ್ಯಂತ ವಿವಿಧ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಲಾಗುತ್ತದೆ. ಅಂತೆಯೇ ಕಾಲೇಜಿನ ವಿದ್ಯಾರ್ಥಿಗಳು ಈ ವಿಷಯದ ಕುರಿತಾದ ಮಾಹಿತಿಗಳನ್ನೊಳಗೊಂಡ ಭಿತ್ತಿಪತ್ರಗಳನ್ನು ರಚಿಸಿ ಎಲ್ಲಾ ತರಗತಿಗಳ ವಿದ್ಯಾರ್ಥಿಗಳಿಗೆ ಜೀವನವು ಅಮೂಲ್ಯ ಹಾಗೂ ಕ್ಷುಲ್ಲಕ ಕಾರಣಗಳಿಗೆ ಜೀವನ ಅಂತ್ಯಗೊಳಿಸುವ ನಿರ್ಧಾರ ಸರಿಯಲ್ಲ.
ಕಾಲೇಜಿನ ಆಪ್ತ ಸಮಾಲೋಚನಾ ವಿಭಾಗವನ್ನು ಸಂಪರ್ಕಿಸಿ ಸೂಕ್ತ ಮಾರ್ಗದರ್ಶನ ಪಡೆಯುವಂತೆ ಅರಿವು ಮೂಡಿಸುವ ಮಾಹಿತಿ ನೀಡಿದರು. ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ವಿದ್ಯಾರ್ಥಿಗಳಿಗೆ ಪ್ರಾಸ್ತಾವಿಕ ಮಾಹಿತಿ ನೀಡಿದರು. ಮನೋವಿಜ್ಞಾನ ವಿಭಾಗದ ಉಪನ್ಯಾಸಕಿ ಶ್ಯಾಮಿಲ ವಿದ್ಯಾರ್ಥಿಗಳಿಗೆ ಸಹಕರಿಸಿದರು. ಉಪನ್ಯಾಸಕರಾದ ದಿವ್ಯಾ ಕುಮಾರಿ, ಡಾ. ಸಾಜಿದ ಉಪಸ್ಥಿತರಿದ್ದರು.