


ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯಿಂದ ಶಿಬಾಜೆ ಗ್ರಾಮದ ಬೂತ್ ಪ್ರಗತಿ ಸಭೆಯು ಶಿಬಾಜೆಯಲ್ಲಿ ನಡೆಯಿತು. ಸಭೆಯಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಬೂತ್ ಮಟ್ಟದಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಕಾರ್ಯಕ್ರಮಗಳನ್ನು ನಡೆಸುವುದು ಮತ್ತು ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸ್ಪಂದಿಸುವ ಬಗ್ಗೆ ಮಾಹಿತಿಯನ್ನು ನೀಡಿದರು.



ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ ಗೌಡ, ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಎಂ. ಎಚ್. ಮುಹಮ್ಮದ್ ಕಲಂದರ್ ಶಾ ಕೊಕ್ಕಡ, ಶಿಬಾಜೆ ಗ್ರಾಮ ಸಮಿತಿಯ ಅಧ್ಯಕ್ಷ ಶ್ರೀಧರ್ ರಾವ್, ಗ್ರಾಮೀಣ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ನಾರಾಯಣ ಗೌಡ, ಮಹಿಳಾ ಘಟಕ ದ ಪ್ರದಾನ ಕಾರ್ಯದರ್ಶಿ ವಿಜಯಲಕ್ಷಿ ಹಾಗೂ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು, ಸದಸ್ಯರು, ಪಕ್ಷದ ಗ್ರಾಮ ಸಮಿತಿ ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.









