Site icon Suddi Belthangady

ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮ-ಹೊಲಿಗೆ ತರಬೇತಿ ಉದ್ಘಾಟನಾ ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕು ಮುಂಡಾಜೆ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಬಿವೃದ್ಧಿ ಯೋಜನೆ ಕಡಿರುದ್ಯಾವರ ಕಾರ್ಯಕ್ಷೇತ್ರದಲ್ಲಿ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಟೈಲರಿಂಗ್ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವನ್ನು ಸಿಎ ಅಬ್ರಾಹಂರವರ ಮನೆಯಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಾವತಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಮಹಿಳೆಯರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ರುಡ್ ಸೆಟ್ ಮತ್ತು ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಸ್ವಉದ್ಯೋಗ ತರಬೇತಿಗಳಿಗೆ ಅವಕಾಶವನ್ನು ಕಲ್ಪಿಸಿದ್ದು ಗ್ರಾಮೀಣ ಮಹಿಳೆಯರಿಗೆ ಅನುಕೂಲವಾಗುವಂತೆ ನಮ್ಮ ಗ್ರಾಮದಲ್ಲಿಯೇ ಟೈಲರಿಂಗ್ ಕಲಿಯಲು ಅವಕಾಶವನ್ನು ಕಲ್ಪಿಸಿದ್ದು ಈ ಒಂದು ಅವಕಾಶವನ್ನು ನಾವು ಸದುಪಯೋಗಪಡಿಸಿಕೊಳ್ಳೋಣ ಎಂದರು.

ವಲಯದ ಮೇಲ್ವಿಚಾರಕ ಜನಾರ್ಧನ ಟೈಲರಿಂಗ್ ತರಬೇತಿ ಪಡಕೊಂಡಲ್ಲಿ ನಮಗೆ ಹೊರಗಡೆ ಹೋಗಲು ಸಾಧ್ಯವಿಲ್ಲದಿದ್ದರೂ ಮನೆಯಲ್ಲಿಯೇ ಕುಳಿತು ಮನೆಯ ಕೆಲಸದೊಂದಿಗೆ ಸ್ವಉದ್ಯೋಗವನ್ನು ಮಾಡಲು ಉತ್ತಮ ಅವಕಾಶವಾಗಿದ್ದು, ಉತ್ತಮ ರೀತಿಯಲ್ಲಿ ತರಬೇತಿಯಲ್ಲಿ ಭಾಗವಹಿಸಿ ತರಬೇತಿಯ ಪ್ರಯೋಜನವನ್ನು ಪಡೆಯಿರಿ ಎಂದರು. ಕಾರ್ಯಕ್ರಮದಲ್ಲಿ ಬಂಗಾಡಿ ಸಿಎ ಬ್ಯಾಂಕ್ ಉಪಾಧ್ಯಕ್ಷ ಆನಂದ ಗೌಡ, ಒಕ್ಕೂಟದ ಅಧ್ಯಕ್ಷ ಜಗದೀಶ್ ಹಾಗೂ ಗೋಪಾಲ ಗೌಡ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಟೈಲರಿಂಗ್ ಶಿಕ್ಷಕಿ ಪುಷ್ಪಾ ತರಬೇತಿಗೆ ಬೇಕಾದ ಪರಿಕರಗಳ ಬಗ್ಗೆ ಸಮಯ ಪಾಲನೆಯ ಬಗ್ಗೆ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮನೆಯ ಹಿರಿಯರಾದ ಮೇರಿ ಅಬ್ರಾಹಂ ವಹಿಸಿದ್ದರು. ಸೇವಾ ಪ್ರತಿನಿಧಿ ಸುರೇಖ ಸ್ವಾಗತಿಸಿ, ಜ್ಞಾನವಿಕಾಸ ಸಮನ್ವಯದಿಕಾರಿ ಮಧುರ ವಸಂತ್ ನಿರೂಪಿಸಿದರು. ರಶ್ಮಿ ದಾಮೋದರ್ ವಂದಿಸಿದರು.

Exit mobile version