Site icon Suddi Belthangady

ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ: ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಸೆ.11ರಂದು ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು. ಬಳಿಕ ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಸ್ವಾಮೀಜಿಯವರ ಪಾದಪೂಜೆ ಮಾಡಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಸ್ವಾಮೀಜಿಯವರಿಗೆ ತುಳಸಿ ಮಾಲೆ ಹಾಕಿ ಶಾಲು ಹೊದಿಸಿ ಗೌರವಿಸಿದರು.

ಪೇಜಾವರ ಸ್ವಾಮೀಜಿ ಅವರು ಹೆಗ್ಗಡೆಯವರಿಗೆ ಫಲ ಮಂತ್ರಾಕ್ಷತೆಯೊoದಿಗೆ ಪ್ರಸಾದ ನೀಡಿ ಆಶೀರ್ವದಿಸಿದರು. ಮಠದ ವತಿಯಿಂದ ಶಾಲು ಹೊದಿಸಿ, ಗೌರವಿಸಿದರು. ಹೇಮಾವತಿ ವೀ. ಹೆಗ್ಗಡೆ ಹಾಗೂ ಡಿ. ಹರ್ಷೇಂದ್ರ ಕುಮಾರ್ ಅವರಿಗೂ ಸ್ವಾಮೀಜಿ ಅವರು ಪ್ರಸಾದ ನೀಡಿ ಆಶೀರ್ವದಿಸಿದರು. ಬಳಿಕ ಸ್ವಾಮೀಜಿ ದೇವರ ದರ್ಶನ ಮಾಡಿ, ವಿಶೇಷ ಸೇವೆ ಸಲ್ಲಿಸಿ ಉಡುಪಿಗೆ ಪ್ರಯಾಣಿಸಿದರು.

Exit mobile version