Site icon Suddi Belthangady

ಗುರುವಾಯನಕೆರೆ-ಉಪ್ಪಿನಂಗಡಿ ಹದಗೆಟ್ಟ ರಸ್ತೆ- 10ಕಿ.ಮೀ ರಸ್ತೆ ರಿಪೇರಿಗೆ ರೂ. 10ಕೋಟಿ ಅನುದಾನ ಬಿಡುಗಡೆಗೆ ಸಚಿವ ದಿನೇಶ್ ಗುಂಡೂರಾವ್ ಪತ್ರ

ಬೆಳ್ತಂಗಡಿ: ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಆ.5ರಂದು ನೀಡಿದ್ದ ಮನವಿ ಉಲ್ಲೇಖಿಸಿ ದಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯ ಲೋಕೋಪಯೋಗಿ ಸಚಿವರಿಗೆ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ರಿಪೇರಿಗೆ ಹಣ ಬಿಡುಗಡೆ ಮಾಡುವಂತೆ ಪತ್ರ ಬರೆದಿದ್ದಾರೆ.

ಉಪ್ಪಿನಂಗಡಿ ಸೇತುವೆಯವರೆಗಿನ 10 ಕಿಲೋಮೀಟ‌ರ್ ರಸ್ತೆಯು ತೀರ್ವ ಹಾನಿಯಾಗಿದ್ದು, ಸದರಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೂ.1000.00 ಲಕ್ಷಗಳ (ರೂ 10 ಕೋಟಿ) ಅನುದಾನ ಬಿಡುಗಡೆ ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯ ಲೋಕೋಪಯೋಗಿ ಸಚಿವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

Exit mobile version