Site icon Suddi Belthangady

ಎ.ಎಸ್.ಐ. ಜಾರ್ಜ್ ಕರ್ತವ್ಯಕ್ಕೆ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಶ್ಲಾಘನೆ

ಮಂಗಳೂರು: ಮೂಲತಃ ಬೆಳ್ತಂಗಡಿ ತಾಲೂಕಿನ ಕಳೆಂಜದವರಾಗಿದ್ದು ಪ್ರಸ್ತುತ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ.ಯಾಗಿರುವ ಜಾರ್ಜ್ ಕೆ.ಡಿ. ಅವರಿಗೆ ಐಪಿಎಸ್ ಅಧಿಕಾರಿಯಾಗಿರುವ ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ.

ಪ್ರಶಂಸನಾ ಪತ್ರ ನೀಡಿ ಗೌರವ: ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 128/2023ರಂತೆ ಕಲಂ 363, 376(2)(ಎನ್), 376(3), 506 ಐಪಿಸಿ & ಕಲಂ 6 ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ತನಿಖಾ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದ ಜಾರ್ಜ್ ಕೆ.ಡಿ.ಅವರು ಈ ಪ್ರಕರಣದಲ್ಲಿ ಅಭಿಯೋಜನೆಗೆ ಪೂರಕವಾಗುವ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯದಲ್ಲಿ ಆರೋಪಿಗೆ ಕಠಿಣ ಶಿಕ್ಷೆ ಆಗುವಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ್ದಾರೆ. ಇವರು ತೋರಿದ ಪರಿಶ್ರಮ, ಕಾರ್ಯ ತತ್ಪರತೆ ಹಾಗೂ ಪ್ರಕರಣದಲ್ಲಿ ತನಿಖಾ ಸಹಾಯಕರಾಗಿ ನಿರ್ವಹಿಸಿದ ಕಾರ್ಯವನ್ನು ನಾನು ಶ್ಲಾಘಿಸುತ್ತೇನೆ. ಈ ಶ್ಲಾಘನೀಯ ಕರ್ತವ್ಯ ನಿಭಾಯಿಸಿದ್ದಕ್ಕಾಗಿ ನಿಮಗೆ ನಗದು ಪುರಸ್ಕಾರವನ್ನು ನೀಡಲಾಗಿದೆ. ಮುಂದಿನ ದಿನಗಳಲ್ಲಿ ನಿಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಇನ್ನಷ್ಟು ಯಶಸ್ಸು ಗಳಿಸಲಿ ಹಾಗೂ ಕರ್ತವ್ಯ ಪ್ರಜ್ಞೆ ಮತ್ತು ತತ್ಪರತೆ ಇತರ ಸಿಬ್ಬಂದಿಗಳಿಗೆ ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಜಾರ್ಜ್ ಅವರಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ. ಜಾರ್ಜ್ ಕೆ.ಡಿ.ಅವರ ಉತ್ತಮ ಸೇವೆಗೆ ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘ ಶ್ಲಾಘನೆ ವ್ಯಕ್ತಪಡಿಸಿದೆ.

Exit mobile version