ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣ ಮತ್ತು ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯ ಜಾಮೀನು ಅರ್ಜಿಯ ವಿಚಾರಣೆ ಸೆ.16ಕ್ಕೆ ಮುಂದೂಡಿಕೆಯಾಗಿದೆ.
ಚಿನ್ನಯ್ಯ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಕೆ ಮಾಡಿ ಇಂದು ವಾದಿಸಿದ್ದು, ಇದಕ್ಕೆ ತಕರಾರು ಸಲ್ಲಿಸಿದ ಎಸ್ ಐ ಟಿ ಪರ ಸರ್ಕಾರಿ ವಕೀಲ ದಿವ್ಯರಾಜ್ ಹೆಗ್ಡೆ ಆಕ್ಷೇಪಣೆ ಸಲ್ಲಿಸಿ ವಾದಿಸಿದರು. ಈ ವಾದ ಪ್ರತಿವಾದ ಆಲಿಸಿದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿಜಯೇಂದ್ರ ಟಿ ಹೆಚ್ ಜಾಮೀನು ಅರ್ಜಿಯ ಆದೇಶ ಸೆ.16ಕ್ಕೆ ಮುಂದೂಡಿಕೆ ಮಾಡಿದ್ದಾರೆ
ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ಸೆ.16ಕ್ಕೆ ಮುಂದೂಡಿಕೆ
