ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್.ಸಿ.ಆರ್ ಇಂಡಿಯನ್ ಇನ್ಸ್ಟಿಟ್ಯೂಟ್ ನ ಪದವಿ ಹಾಗೂ ಪದವಿಪೂರ್ವ ವಿಭಾಗದಲ್ಲಿ ಪ್ರತಿಭಾ ದಿನಾಚರಣೆ ಸೆ.12ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರು, ಸಂಯೋಜಕರು ಹಾಗೂ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದು, ವಿದ್ಯಾರ್ಥಿಗಳ ಪ್ರತಿಭೆಯನ್ನು ಮೆಚ್ಚಿದರು. ವಿವಿಧ ಕಲೆಗಳಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ನೃತ್ಯ, ಸಂಗೀತ, ನಾಟಕ, ವಾಚನ ಮುಂತಾದ ಕಾರ್ಯಕ್ರಮಗಳು ದಿನದ ಮುಖ್ಯ ಆಕರ್ಷಣೆಯಾಗಿದ್ದವು.
ಪ್ರಾಂಶುಪಾಲರು ಸಂಯೋಜಕರು ಹಾಗೂ ಉಪನ್ಯಾಸಕರು ವಿದ್ಯಾರ್ಥಿಗಳ ಉತ್ಸಾಹಕ್ಕೆ ಶ್ಲಾಘನೆ ಸಲ್ಲಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ಪದವಿ ಪೂರ್ವ ವಿಭಾಗದ ಮುಖ್ಯಸ್ಥೆ ಸೌಮ್ಯ ಎನ್. ಧನ್ಯವಾದಗಳನ್ನು ಅರ್ಪಿಸಿ ಪ್ರತಿಭಾ ದಿನಾಚರಣೆ ಯಶಸ್ವಿಯಾಗಿ ಸಂಪನ್ನವಾಯಿತು.