Site icon Suddi Belthangady

ಸೆ.14: ಧರ್ಮಸ್ಥಳಕ್ಕೆ ದ.ಕ., ಉಡುಪಿಯ ಸಹಕಾರಿಗಳ ಯಾತ್ರೆ: ಬೆಳ್ತಂಗಡಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಹಕಾರಿ ಬಂಧುಗಳು ಬರಬೇಕು- ಶಶಿಕುಮಾರ್ ರೈ ಬಾಲ್ಗೊಟ್ಟು

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಡೆಯುತ್ತಿರುವ ಅಪಪ್ರಚಾರ ಮತ್ತು ಧರ್ಮಾಧಿಕಾರಿಗಳ ಮೇಲಿನ ಅವಹೇಳನ ಖಂಡಿಸಿ ಸಹಕಾರಿಗಳೆಲ್ಲರೂ ಹೋರಾಡಬೇಕು ಎನ್ನುವ ದೃಷ್ಟಿಯಿಂದ ದ.ಕ ಮತ್ತು ಉಡುಪಿ ಜಿಲ್ಲೆಯ ಸಹಕಾರಿ ಯೂನಿಯನ್ ವತಿಯಿಂದ ಸೆ.14ರಂದು ಸಹಕಾರ ಬಂಧುಗಳ ಧರ್ಮಸ್ಥಳ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಎರಡು ಜಿಲ್ಲೆಗಳಿಂದ ಸುಮಾರು 3 ಸಾವಿರಕ್ಕೂ ಅಧಿಕ ವಾಹನಗಳಲ್ಲಿ ಸುಮಾರು 15 ಸಾವಿರಕ್ಕೂ ಅಧಿಕ ಸಹಕಾರಿ ಬಂಧುಗಳು ಧರ್ಮಸ್ಥಳಕ್ಕೆ ತೆರಳಿಲಿದ್ದಾರೆ. ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೂಟ್ಟು ಹೇಳಿದರು.

ಅವರು ಸೆ.10ರಂದು ಬೆಳ್ತಂಗಡಿ ಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಹೇಳಿದರು. ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯತೆಯನ್ನು ಹಾಳುಮಾಡಲು ಸ್ಥಾಪಿತ ಹಿತಾಸಕ್ತಿಗಳು ಹಲವಾರು ದಿನಗಳಿಂದ ಷಡ್ಯಂತ್ರ ಮಾಡುತ್ತಿರುವುದನ್ನು ಗಮನಿಸುತ್ತಿದ್ದೇವೆ. ಎಸ್‌ಐಟಿ ತನಿಖೆಯ ಮೂಲಕ ನಿಜಾಂಶ ಬೆಳಕಿಗೆ ಬರುತ್ತಿದೆ. ಧರ್ಮಸ್ಥಳ ಕ್ಷೇತ್ರ, ಧರ್ಮಾಧಿಕಾರಿಗಳ ವಿರುದ್ಧ ಕೆಲವರು ಮಾಡುತ್ತಿರುವ ಆರೋಪಗಳು ಸುಳ್ಳು ಎನ್ನುವುದು ಸಾಬೀತಾಗುತ್ತಿದೆ. ರಾಜ್ಯದ ಜನಪ್ರತಿನಿಧಿಗಳು, ಧಾರ್ಮಿಕ ಕ್ಷೇತ್ರಗಳ ಪ್ರತಿನಿಧಿಗಳು ಕೆಲವು ದಿನಗಳಿಂದ ಧರ್ಮಜಾಗೃತಿ ಯಾತ್ರೆಯನ್ನು ಮಾಡುತ್ತಿದ್ದಾರೆ. ಜಿಲ್ಲೆಯ ಸಾಂಸ್ಕೃತಿಕ ರಾಯಭಾರಿ ಡಾ.ಎಂ.ಮೋಹನ ಆಳ್ವರು ದ.ಕ., ಉಡುಪಿ ಜಿಲ್ಲೆಯ ಜನಪ್ರತಿನಿ ಧಿಗಳು, ಗಣ್ಯರನ್ನು ಸೇರಿಸಿಕೊಂಡು ಸಭೆ ನಡೆಸಿ ನಾವೆಲ್ಲರೂ ಸೇರಿ ಧರ್ಮಜಾಗೃತಿ ಸಭೆಯನ್ನು ನಡೆಸಬೇಕೆಂದು ಹೇಳಿದ್ದರು. ಈ ಕೇಂದ್ರ ಸಮಿತಿಯ ನಿರ್ಣಯದಂತೆ ಪ್ರತೀ ತಾಲೂಕಿನಲ್ಲಿ ಧರ್ಮಜಾಗೃತಿ ಸಮಾವೇಶವನ್ನು ನಡೆಸುತ್ತಿದ್ದೇವೆ. ಇದೀಗ ದ.ಕ. ಮತ್ತು ಉಡುಪಿ ಜಿಲ್ಲೆಯ ಸಹಕಾರಿ ಬಂಧುಗಳು ಸೇರಿಕೊಂಡು ಧರ್ಮಸ್ಥಳಕ್ಕೆ ಯಾತ್ರೆ ಕೈಗೊಳ್ಳುವ ನಿಟ್ಟಿನಲ್ಲಿ ಸಹಕಾರ ರತ್ನ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ ಎಂ.ಎನ್.ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಪೂರ್ವಭಾವಿ, ಸಮಾಲೋಚನೆ ನಡೆಸಲಾಗಿದೆ ಎಂದು ಹೇಳಿದರು.

ಬೆಳ್ತಂಗಡಿ ತಾಲೂಕಿನಿಂದ 150ಕ್ಕೂ ಹೆಚ್ಚು ವಾಹನಗಳು, 1500ಕ್ಕಿಂತಲೂ ಹೆಚ್ಚು ಜನರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಕಳೆದ 15 ವರ್ಷಗಳಿಂದ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನಿರ್ಮಾಣಗೊಳ್ಳುವ ಸಂಧರ್ಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳು ಪ್ರಸಾದ ರೂಪದಲ್ಲಿ 50 ಸಾವಿರದ 2 ಲಕ್ಷ ರೂ.ಗಳವರೆಗೆ ದೇಣಿಗೆ ನೀಡಿ ಸಹಕರಿಸುವ ಕೆಲಸ ಮಾಡುತ್ತಾ ಬಂದಿದ್ದಾರೆ. ಧರ್ಮಕ್ಷೇತ್ರವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಹಕಾರಿಗಳೆಲ್ಲರೂ ಹೋರಾಡಬೇಕು ಎನ್ನುವ ದೃಷ್ಟಿಯಿಂದ ಸೆ.14ರಂದು ಧರ್ಮಸ್ಥಳ ಯಾತ್ರೆಯನ್ನು ಕೈಗೊಂಡಿದ್ದೇವೆ.
ಮಧ್ಯಾಹ್ನ 12 ಗಂಟೆಗೆ ಉಜಿರೆಯಿಂದ ವಾಹನ ಜಾಥಾ ಹೊರಡಲಿದೆ. ಧರ್ಮಸ್ಥಳ ದ್ವಾರದ ಬಳಿ ಕ್ಷೇತ್ರದ ಪ್ರತಿನಿಧಿಗಳು ಸ್ವಾಗತ ಕೋರಲಿದ್ದಾರೆ. ದ್ವಾರದ ಬಳಿಯಿಂದ ಪಾದಯಾತ್ರೆಯ ಮೂಲಕ ಕ್ಷೇತ್ರದವರೆಗೆ ತೆರಳಿ ಅಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಿದ್ದೇವೆ. ಬಳಿಕ ಅಮೃತವರ್ಷಿಣಿ ಸಭಾಂಗಣದಲ್ಲಿ ಎಲ್ಲರೂ ಸಮಾವೇಶಗೊಳ್ಳಲಿದ್ದಾರೆ. ಅಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆಯವರು ಆಶೀರ್ವಚನ ನೀಡಲಿದ್ದಾರೆ. ಸಹಕಾರ ರತ್ನ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ|ಎಂ. ಎನ್.ರಾಜೇಂದ್ರ ಕುಮಾರ್ ಅವರು ಸಹಕಾರಿಗಳಿಗೆ ಶುಭಹಾರೈಸಲಿದ್ದಾರೆ. ಇದೊಂದು ಐತಿಹಾಸಿಕ, ಅಭೂತಪೂರ್ವ ಕಾರ್ಯಕ್ರಮವಾಗಲಿದೆ ಎಂದು ಶಶಿಕುಮಾ‌ರ್ ರೈ ಬಾಳ್ಕೊಟ್ಟು ಹೇಳಿದರು.

ಕಳೆಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು ಮಾತನಾಡಿ ಧರ್ಮಸ್ಥಳದಿಂದ ದೇವಸ್ಥಾನ ಬ್ರಹ್ಮಕಲಶೋತ್ಸವ, ದೈವಸ್ಥಾನಕ್ಕೆ ಹಾಗೂ ಭಜನಾ ಮಂಡಳಿಗಳಿಗೆ ಆನೇಕ ರೀತಿಯ ದೇಣಿಗೆಯನ್ನು ನೀಡಿದ್ದಾರೆ. ಅಂತಹವರು ಮೇಲೆ ಇವತ್ತು ಅಪಪ್ರಚಾರ ನಡೆಯುತ್ತಿದೆ ಅದು ನಿಲ್ಲಬೇಕು ಎಂಬ ದೃಷ್ಟಿಯಿಂದ ಯಾತ್ರೆಯನ್ನು ಹಮ್ಮಿಕೊಂಡಿದ್ದೇವೆ. ಎಲ್ಲಾ ಸಹಕಾರಿಗಳು ಈ ಕಾರ್ಯಕ್ರಮಕ್ಕೆ ಬಂದು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಮಡಂತ್ಯಾರು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜೋಯೆಲ್ ಮೆಂಡೋನ್ನ ಮಾತನಾಡಿ, ಖಾವಂದರು ಚರ್ಚ್‌ಗಳಿಗೆ ಕೂಡ ಆನೇಕ ದೇಣಿಗೆಯನ್ನು ನೀಡಿದ್ದಾರೆ. ಈಗಾಗಲೇ ಹಲವು ಸಂಘ ಸಂಸ್ಥೆಗಳ ವತಿಯಿಂದ ಖಾವಂದರಿಗೆ ಬೆಂಬಲ ಸಿಕ್ಕಿದೆ. ಸಹಕಾರಿ ವತಿಯಿಂದ ಬೆಂಬಲ ಸಿಗಬೇಕು ಎಂಬ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮಿಕೊಂಡಿದೇವೆ ಎಂದು ಹೇಳಿದರು. ಪತಿ ಸಂಘದಿಂದ ಮೂರು ಗಾಡಿಗಳು ಯಾತೆಯಲಿ ಪಾಲೊಳಬೇಕು ಎಂದು ಹೇಳದರು.

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಜಯರಾಮ್ ರೈ ಮಾತನಾಡಿ ಸಹಕಾರಿಗಳ ಯಾತ್ರೆ ಯಶ್ವಸಿಗೊಳಿಸಬೇಕು. ಅದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು ಎಂದರು. ಸಭೆಯಲ್ಲಿ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಸತೀಶ್ ಕಾಶಿಪಟ್ಟ, ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕ ಪ್ರಭಾಕರ್ ಆರಂಬೋಡಿ, ಸತೀಶ್, ಬೆಳ್ತಂಗಡಿ ತಾಲೂಕಿನ ಸಹಕಾರಿ ಬ್ಯಾಂಕ್‌ಗಳ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಡಿಸಿಸಿ ಬ್ಯಾಂಕಿನ ಸಿಬ್ಬಂದಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Exit mobile version