ಮಡಂತ್ಯಾರು: ಸೆ.12ರಂದು ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಮಕ್ಕಳೋತ್ಸವ ಸ್ಪರ್ಧೆಯಲ್ಲಿ ಯಶಸ್ವಿನಿ ಕುಲಾಲ್ ಮಡಂತ್ಯಾರು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ “ಯಕ್ಷ ನೃತ್ಯ’ದಲ್ಲಿ ಭಾಗವಹಿಸಿ, ಪ್ರಶಸ್ತಿ ಪಡೆದು ರಾಜಸ್ಥಾನದ ಜೈಪುರದಲ್ಲಿ ನಡೆಯುವ ನ್ಯಾಷನಲ್ ಲೆವೆಲ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಪುಂಜಾಲಕಟ್ಟೆ ಕೆ.ಪಿ.ಎಸ್. ಪಬ್ಲಿಕ್ ಸ್ಕೂಲ್ 9ನೇ ತರಗತಿ ವಿದ್ಯಾರ್ಥಿ ಹಾಗೂ ಮಂಜುಳ ಮತ್ತು ಸತೀಶ್ ಕುಲಾಲ್ ದಂಪತಿಗಳ ಪುತ್ರಿಯಾಗಿದ್ದಾಳೆ.