Site icon Suddi Belthangady

ಪ್ರಾಥಮಿಕ, ಪ್ರೌಢ ಶಾಲಾ ಯೋಗಾಸನ ಸ್ಪರ್ಧೆಯಲ್ಲಿ ಬೆಳ್ತಂಗಡಿ ಶ್ರೀ ಧ. ಮ. ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ

ಬೆಳ್ತಂಗಡಿ: ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ಯೋಗಾಸನ ಸ್ಪರ್ಧೆ ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಈ ಯೋಗಾಸನ ಸ್ಪರ್ಧೆಯಲ್ಲಿ ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ವರ್ಷಿಣಿ ಆರ್. ಎಸ್ ಮತ್ತು ತ್ರಿಶಾಲಿ 14 ವರ್ಷದ ಒಳಗಿನ ಬಾಲಕಿಯ ವಿಭಾಗದ ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಕೆ.ಎಸ್. ಸಮನ್ಯು ಮತ್ತು ಕಾರ್ತಿಕ್ ಪ್ರಸಾದ್ 14 ವರ್ಷದೊಳಗಿನ ಬಾಲಕರ ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ. ರಿತ್ವಿಕ್ ಶೆಟ್ಟಿ ಮತ್ತು ಶ್ರೀವಿನೀತ್ ಎಮ್. 17 ವರ್ಷದ ಒಳಗಿನ ಬಾಲಕರ ವಿಭಾಗದ ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ, ಪ್ರಶ್ಯಾ, ಅನುಷ್ಕ ಜೈನ್,17 ವರ್ಷದ ಒಳಗಿನ ಬಾಲಕಿಯರ ವಿಭಾಗದ ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

Exit mobile version