ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಹಾಗೂ ಶ್ರೀರಾಮ ಶಾಲೆ ಸುಲ್ಕೇರಿಯ ಇವರ ಆಶ್ರಯದಲ್ಲಿ ಸೆ.11ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿ ಶ್ರೀರಾಮ ಶಾಲೆಯ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ. ವಿದ್ಯಾರ್ಥಿಗಳಿಗೆ ಸುಲ್ಕೇರಿ ಮಹಾಮ್ಮಾಯಿ ಸ್ಪೋರ್ಟ್ ಕ್ಲಬ್ ಸದಸ್ಯ ವರುಣ್ ಶೆಟ್ಟಿ ತರಬೇತಿ ನೀಡಿರುತ್ತಾರೆ.