ಧರ್ಮಸ್ಥಳ: ಮೊಗೇರಡ್ಕ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಯೋಗಾಸನ ಸ್ಪರ್ಧೆಯಲ್ಲಿ ಧರ್ಮಸ್ಥಳದ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದಿರುತ್ತಾರೆ. ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ವಿಭಾಗದಲ್ಲಿ ಶ್ರೀಯಾ ಮತ್ತು ಅದಿತಿ ಅವರ ತಂಡವು ಆರ್ಟಿಸ್ಟಿಕ್ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತದೆ. ಶ್ರೀಯ ಮತ್ತು ಅಂಜಲಿ ತಂಡವು ರಿದಮ್ಯಾಟಿಕ್ ಯೋಗದಲ್ಲಿ ದ್ವಿತೀಯ ಸ್ಥಾನ ಗಳಿಸಿದೆ. ಪ್ರೌಢಶಾಲಾ ವಿಭಾಗದಲ್ಲಿ ಅನುಜ್ಞ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಬಹುಮಾನ
