ನಾರಾವಿ: ಸಂತ ಅಂತೋನಿ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ )ದಕ್ಷಿಣ ಕನ್ನಡ ಜಿಲ್ಲೆ ಇದರ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸೆ.12ರಂದು ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಮೈದಾನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾoಶುಪಾಲ ಸಂತೋಷ್ ಸಲ್ದಾನಾ ಎಲ್ಲರನ್ನು ಸ್ವಾಗತಿಸಿದರು.
ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಸಂತ ಅಂತೋನಿ ಪದವಿ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕ ಸ್ವಾಮಿ ರೂಪೇಶ್ ರವಿನ್ ತಾವರೋ “ಕಬಡ್ಡಿ ನಮ್ಮ ನೆಲದ ಸಂಸ್ಕೃತಿಯನ್ನು ಬಿಂಬಿಸುವ ಕ್ರೀಡೆ. ಕ್ರೀಡೆಯಿಂದ ಮಾತ್ರ ಒಗ್ಗಟ್ಟು ಮೂಡಿಸಲು ಸಾಧ್ಯ “ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ನಾರಾವಿ ಗ್ರಾಮ ಪಂಚಾಯತಿನ ಅಧ್ಯಕ್ಷ ರಾಜವರ್ಮ ಜೈನ್, ತಾಲೂಕು ಕ್ರೀಡಾ ಸಂಯೋಜಕ ಸಂದೀಪ್ ಪಲ್ಲೋಡಿ, ನಾರಾವಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಸಂಜಯ್ ಮೀರಾoದ, ಕಾರ್ಯದರ್ಶಿ ಎವ್ಜಿನ್ ರೋಡ್ರಿಗಸ್, ನಾರಾವಿ ಗ್ರಾಮ ಪಂಚಾಯತ್ ಸದಸ್ಯೆ ಡೈನಾ ರೋಡ್ರಿಗಸ್, ನಾರಾವಿ ಪ್ರೌಢ ಶಾಲೆ ಮುಖ್ಯ ಅಧ್ಯಾಪಕ ಗೋಪಾಲಕೃಷ್ಣ ತುಳುಪುಳೆ, ಸಂತ ಪಾವ್ಲರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಅಧ್ಯಾಪಕಿ ಸೋಫಿಯಾ ಫೆರ್ನಾಂಡಿಸ್, ಇಂಗ್ಲಿಷ್ ಮೀಡಿಯಂ ಶಾಲೆಯ ಮುಖ್ಯ ಅಧ್ಯಾಪಕ ರಿಚರ್ಡ್ ಮೋರಸ್, ನಾರಾವಿ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರದೀಪ್ ಬಿ. ಉಪಸ್ಥಿತರಿದ್ದರು.
ಬೆಳ್ತಂಗಡಿ ತಾಲೂಕಿನ 16ಬಾಲಕರ ಹಾಗೂ 5ಬಾಲಕಿಯರ ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದವು. ಬಾಲಕರ ಮತ್ತು ಬಾಲಕಿಯರ ಎರಡೂ ವಿಭಾಗದಲ್ಲಿ ಕ್ರಮವಾಗಿ ಪ್ರಥಮ ಸ್ಥಾನವನ್ನು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು, ವೇಣೂರು ದ್ವಿತೀಯ ಸ್ಥಾನವನ್ನು ಸರಕಾರಿ ಪದವಿಪೂರ್ವ ಕಾಲೇಜು ಪಡೆದುಕೊಂಡವು. ಉಪನ್ಯಾಸಕ ಅವಿಲ್ ಮೋರಸ್ ಕಾರ್ಯಕ್ರಮ ನಿರೂಪಿಸಿದರು.