ಬೆಳ್ತಂಗಡಿ: ಎನ್.ಆರ್.ಎಲ್.ಎಂ. ತಾಲೂಕು ಅಭಿಯಾನ ನಿರ್ವಹಣಾ ಘಟಕದಿಂದ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಪುಸ್ತಕ ಬರಹಗಾರರ ತರಬೇತಿ ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸೆ. 10ರಿಂದ 12ರವರೆಗೆ ನಡೆಸಲಾಯಿತು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ತರಬೇತಿಯ ಒಕ್ಕೂಟಗಳ ಕಾರ್ಯನಿರ್ವಹಣೆ ಮತ್ತು ಎಂಬಿಕೆಯವರ ಪಾತ್ರ ಹಾಗೂ ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಕಾರ್ಯಕ್ರಮದ ಉದ್ದೇಶದ ಕುರಿತಂತೆ ಪ್ರಾಸ್ತಾವಿವಾಗಿ ಮಾತನಾಡಿದರು. ರಾಜ್ಯ ಸಂಪನ್ಮೂಲ ವ್ಯಕ್ತಿಯಾದ ಶ್ರೀ ಲಕ್ಷ್ಮಣ್ ಇವರು ತರಬೇತಿಯನ್ನು ನೀಡಿದರು.
ಬೆಳ್ತಂಗಡಿ ತಾಲೂಕಿನ 48 ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳಿಂದ 48 ಜನ ಮತ್ತು ಬಂಟ್ವಾಳ ತಾಲೂಕಿನ 6 ಜನ ಮುಖ್ಯ ಪುಸ್ತಕ ಬರಹಗಾರರು ತರಬೇತಿಯಲ್ಲಿ ಭಾಗವಹಿಸಿದರು.
ತರಬೇತಿಯ ದಿನಗಳಲ್ಲೂ ಉಜಿರೆ ಸಂಜೀವಿನಿ ಒಕ್ಕೂಟದ ಅಕ್ಕ ಕೆಫೆಯಿಂದ ಉಪಹಾರ ಮತ್ತು ಭೋಜನದ ವ್ಯವಸ್ಥೆಯನ್ನು ಮಾಡಲಾಯಿತು. ತರಬೇತಿ ಕಾರ್ಯಕ್ರಮದಲ್ಲಿ ತಾಲೂಕು ವ್ಯವಸ್ಥಾಪಕರು, ವಲಯ ಮೇಲ್ವಿಚಾರಕರುಗಳು, ಬಿಆರ್ ಪಿ -ಪಿಆರ್ ಐ ಉಪಸ್ಥಿತರಿದ್ದು ತರಬೇತಿಯ ಯಶಸ್ಸಿಗೆ ಸಹಕರಿಸಿದರು.