ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯ ಸೆ. 14ರಂದು ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ವಹಿಸಿ ಮಾತನಾಡಿ ಸಂಘವು ವರದಿ ವರ್ಷದಲ್ಲಿ ಒಟ್ಟು ರೂ. 341 ಕೋಟಿ ವ್ಯವಹಾರ ನಡೆಸಿ, ರೂ. 1.53 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 13 ರಷ್ಟು ಡಿವಿಡೆಂಟ್ ನೀಡುವುದಾಗಿ ತಿಳಿಸಿದರು.
ಈ ವೇಳೆ 2024-25 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅರಸಿನಮಕ್ಕಿ ಪ್ರೌಢ ಶಾಲೆ ಹಾಗೂ ನೇಲ್ಯಡ್ಕ ಪ್ರೌಢ ಶಾಲೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಗೌರವಿಸಲಾಯಿತು.
ಹಾಗೂ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿ.ಪ್ರಾ. ಶಾಲಾ ನಿವೃತ್ತ ಶಿಕ್ಷಕ ಸೀತಾರಾಮ ಅವರನ್ನು ಸನ್ಮಾನಿಸಲಾಯಿತು.
ಉಪಾಧ್ಯಕ್ಷ ರಾಜು ಕೆ., ನಿರ್ದೇಶಕರಾದ ಕೊರಗಪ್ಪ ಗೌಡ, ರತೀಶ್ ಬಿ, ಧರ್ಮರಾಜ್ ಎ., ಗಂಗಾವತಿ, ಬೇಬಿ, ನಾಗೇಶ್ ಜಿ., ಬೇಬಿ ಕಿರಣ್, ಕೃಷ್ಣಪ್ಪ ಗೌಡ ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದು ಸಹಕರಿಸಿದರು.
ಸಂಘದ ನಿರ್ದೇಶಕ ವರದಶಂಕರ ದಾಮ್ಲ ಸ್ವಾಗತಿಸಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಟಿ. ರವಿಚಂದ್ರ ರಾವ್ ವಾರ್ಷಿಕ ವರದಿ ವಾಚಿಸಿದರು. ಶಾಖಾಧಿಕಾರಿ ಜಯಂತಿ ಡಿ. ಸನ್ಮಾನಿತರ ಪರಿಚಯವನ್ನು ಮಾಡಿದರು. ಮೃತ ಪಟ್ಟ ಸಂಘದ ಸದಸ್ಯರಿಗೆ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಬೆಳಿಗ್ಗೆ ಬೃಹತ್ ರಕ್ತದಾನ ಶಿಬಿರ ಹಾಗೂ ಮಧ್ಯಾಹ್ನ ಯಕ್ಷಗಾನ ತಾಳಮದ್ದಳೆ ಶಲ್ಯ ಸಾರಥ್ಯ ನಡೆಯಿತು. ಉಪಕಾರ್ಯದರ್ಶಿ ಹರಿಣಾಕ್ಷಿ ಡಿ. ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ರತೀಶ್ ಗೌಡ ಧನ್ಯವಾದವಿತ್ತರು.