ಬೆಳ್ತಂಗಡಿ: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯ ಸಾಮಾನ್ಯ ಸಭೆ ಹಾಗೂ ನೂತನವಾಗಿ ಆಯ್ಕೆಯಾದ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಸೆ.14ರಂದು ಮಂಜುಶ್ರೀ ಜೇಸಿ ಭವನದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ನೂತನವಾಗಿ ಆಯ್ಕೆ ಅದ ಬೆಳ್ತಂಗಡಿ ಕ್ಷೇತ್ರ ಸಮಿತಿ ಅಧ್ಯಕ್ಷ ರಾಜು ಪೂಜಾರಿ ಅಳದಂಗಡಿ ವಹಿಸಿದ್ದರು. ಜಿಲ್ಲಾ ಸಮಿತಿ ಸಂಘಟನಾ ಕಾರ್ಯದರ್ಶಿ ಕುಶಾಲಪ್ಪ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಸಮಿತಿ ನಿಕಟಪೂರ್ವ ಕಾರ್ಯದರ್ಶಿ ನಾಗೇಶ್ ಕುಮಾರ್ ವರದಿ ಮತ್ತು ಲೆಕ್ಕಪತ್ರ ಮಂಡಿಸಿ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡಿದರು. ಜಿಲ್ಲಾ ಸಮಿತಿಯ ಉಪಾಧ್ಯಕ್ಷೆ ಶಾಂಭವಿ ಪಿ. ಬಂಗೇರ ಟೈಲರ್ಸ್ ಸಂಫಟನೆ ಬಲ ಪಡಿಸುವ ಕುರಿತು ಮಾಹಿತಿಯನ್ನು ನೀಡಿದರು. ಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಲ್ಯಾನ್ಸಿ ಡಿ ಸೋಜ ತಾಲೂಕಿನ ಎಲ್ಲಾ ಟೈಲರ್ಸ್ ವೃತ್ತಿ ಬಾಂಧವರ ಸಹಕಾರವನ್ನು ಕೋರಿದರು.
ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ರಾಜು ಪೂಜಾರಿ ಅವರು ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಸರಕಾರದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಿದ್ದು, ಸೆ.16ರಂದು ಮಂಗಳೂರಿನಲ್ಲಿ ನಡೆಯುವ ಕಾರ್ಮಿಕ ಇಲಾಖೆಯ ಅಸಂಘಟಿತ ವಲಯದ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ವೃತ್ತಿ ಬಾಂಧವರು ಅತ್ಯಧಿಕ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು.
ಎಲ್ಲಾ ವಲಯಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ವತಿಯಿಂದ ನೂತನವಾಗಿ ಆಯ್ಕೆಯಾದ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಅವರನ್ನು ಅಭಿನಂದಿಸಲಾಯಿತು. ಕ್ಷೇತ್ರ ಸಮಿತಿ ಕೋಶಾಧಿಕಾರಿ ಶಶಿಕಲಾ ಮಡಂತ್ಯಾರ್, ಮಾಜಿ ಕೋಶಾಧಿಕಾರಿ ರವೀಂದ್ರ ಗೇರುಕಟ್ಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವತ್ಸಲಾ ಉಜಿರೆ ಪ್ರಾರ್ಥನೆ ಹಾಡಿದರು. ಮೋಹನ್ ದಾಸ್ ಅಳದಂಗಡಿ ಸ್ವಾಗತಿಸಿದರು. ಕ್ಷೇತ್ರ ಸಮಿತಿ ಮಾಜಿ ಪ್ರಧಾನ ಕಾರ್ಯದರ್ಶಿ ಸದಾನಂದ ಸಾಲಿಯಾನ್ ಬಳಂಜ ಕಾರ್ಯಕ್ರಮ ನಿರೂಪಿಸಿದರು. ವಸಂತ ಕೋಟ್ಯಾನ್ ಸ್ವಾತಿ ಧನ್ಯವಾದ ಸಲ್ಲಿಸಿದರು.