ಬೆಳ್ತಂಗಡಿ: ಶ್ರೀ ಗುರುದೇವ ಎಜುಕೇಶನ್ ಟ್ರಸ್ಟ್, ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ರಾಜ್ಯಶಾಸ್ತ್ರ ವಿಭಾಗದಿಂದ ಹಮ್ಮಿಕೊಂಡಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಸವಿತಾ ವಹಿಸಿಕೊಂಡು ಅಧ್ಯಕ್ಷಿಯ ಮಾತುಗಳನ್ನಾಡಿದರು. ವಾಣಿಜ್ಯಶಾಸ್ತ್ರ ಮುಖ್ಯಸ್ಥ ಶಮಿವುಲ್ಲಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಅಕ್ಷತಾ ಪ್ರಜಾಪ್ರಭುತ್ವದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು.
ಸುಶ್ಮಿತಾ ತೃತೀಯ ಬಿ.ಎ ಸ್ವಾಗತಿಸಿ, ಚಂದನ ತೃತೀಯ ಬಿ.ಎ ಕಾರ್ಯಕ್ರಮ ನಿರೂಪಿಸಿದರು. ಮುನೀರ ಬಾನು ತೃತೀಯ ಬಿ.ಎ. ಧನ್ಯವಾದ ಅರ್ಪಿಸಿದರು.