Site icon Suddi Belthangady

ಸೆ. 23: ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್, ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು, ಮಂಗಳೂರು ಅತ್ತಾವರ ಕೆ.ಎಂ.ಸಿ. ಬ್ಲಡ್ ಸೆಂಟರ್, ಬೆಳ್ತಂಗಡಿ ರೋಟರಿ ಕ್ಲಬ್, ರಾಷ್ಟ್ರೀಯ ಸೇವಾ ಯೋಜನ ಘಟಕ, ಶ್ರೀ ಗುರುದೇವ ಪ್ರ.ದ. ಕಾಲೇಜು ರೆಡ್ ರಿಬ್ಬನ್ ಕ್ಲಬ್, ಶ್ರೀ ಗುರುದೇವ ಪ್ರ. ದರ್ಜೆ ಕಾಲೇಜು ಇವುಗಳ ಸಹಯೋಗದೊಂದಿಗೆ ಸೆ. 23ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ರ ವರೆಗೆ ಬೃಹತ್ ಬೆಳ್ತಂಗಡಿ ಶ್ರೀ ಗುರು ದೇವ ಕಾಲೇಜಿನಲ್ಲಿ ರತ್ತದಾನ ಶಿಬಿರ ನಡೆಯಲಿದೆ.

ಉದ್ಘಾಟನೆ ಮತ್ತು ಅಧ್ಯಕ್ಷತೆಯನ್ನು ಶ್ರೀ ಗುರುದೇವ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷೆ ಪ್ರೀತಿತಾ ಧರ್ಮ ವಿಜೇತ್ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೆ.ಎಂ.ಸಿ ಆಸ್ಪತ್ರೆಯ ಡಾ.ಐಶ್ವರ್ಯ ಸತ್ಯನಾಥನ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರೊ. ಪ್ರಕಾಶ್ ಪ್ರಭು ಭಾಗವಹಿಸಲಿದ್ದಾರೆ. ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲೆ ಡಾ.ಸವಿತಾ, ಶ್ರೀ ಗುರುದೇವ ಪ. ಪೂ. ಕಾಲೇಜು ಪ್ರಾಂಶುಪಾಲ ಸುಕೇಶ್ ಕುಮಾರ್, ಎನ್.ಎಸ್.ಎಸ್ ಅಧಿಕಾರಿ ಬಿ.ಎ. ಶಮಿವುಲ್ಲಾ ಗೌರವ ಉಪಸ್ಥಿತರಿರುವರು ಎಂದು ಸಂಸ್ಥೆಯ ಅಧ್ಯಕ್ಷೆ ಪ್ರೀತಿತಾ ಧರ್ಮ ವಿಜೇತ್ ತಿಳಿಸಿರುತ್ತಾರೆ.

Exit mobile version