ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯ 10ನೇ ತರಗತಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಸೆ. 14ರಂದು ನಡೆಯಿತು.
ಕಳೆದ 35ವರ್ಷಗಳ ಬಳಿಕ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮವು ಬಹಳ ಅದ್ದೂರಿಯಾಗಿ ನಡೆಯಿತು. ಶಾಲಾ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಮತ್ತು ಶಾಲೆಗೆ ಟಿವಿಯನ್ನು ಕೊಡುಗೆಯಾಗಿ ನೀಡಲಾಯಿತು. ಸುಮಾರು 50 ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.