ಉಜಿರೆ: “ಭಾಷೆ ಭಾವನೆಗಳಿಗೆ ಮಾಧ್ಯಮ. ಪ್ರಸ್ತುತ ಅನೇಕ ಭಾಷೆಗಳನ್ನು ಕಲಿಯುವ ಅವಕಾಶಗಳಿವೆ ಬಳಸಿಕೊಳ್ಳಿ” ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್.ಕೆ.ಡಿ.ಆರ್.ಡಿ.ಪಿ) ಯ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿ.ಇ.ಒ) ಅನಿಲ್ ಕುಮಾರ್ ಹೇಳಿದರು. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ ನಡೆದ ‘ಹಿಂದಿ ದಿವಸ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ನೃತ್ಯ, ಕಿರು ಪ್ರಹಸನ, ವೃಂದ ಗಾಯನ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲ]ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಆತ್ಮೀಯ ಹಾಗೂ ಧೃತಿ ನಿರೂಪಿಸಿದರು.