ಉಜಿರೆ: ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಉಜಿರೆ ಗ್ರಾಮ ಪಂಚಾಯತ್, ಪ್ರೇರಣ ಸಂಜೀವಿನಿ ಒಕ್ಕೂಟ ಹಾಗೂ ಚಿಕ್ಕಮಗಳೂರು ಶ್ರೀ ಅನ್ನಪೂರ್ಣೇಶ್ವರಿ ಚಾರಿಟಿ ಫೌಂಡೇಶನ್ ಸಹಭಾಗಿತ್ವದಲ್ಲಿ ಉಜಿರೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನವೀಕರಿಸಬಹುದಾದ ಇಂಧನ ಘನತ್ಯಾಜ್ಯ ನಿರ್ವಹಣೆ ಹಾಗೂ ಮಳೆ ನೀರು ಕೊಯ್ಲು ವಿಷಯದಲ್ಲಿ ಅರಿವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಗಿಡ ನೀಡುವ ಮೂಲಕ ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಉಶಾಕಿರಣ ಕೊರಂಟೈನ್ ಅವರು ಉದ್ಘಾಟಿಸಿ ಶುಭ ಹಾರೈಸಿದರು. ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ಅವರು ಘನತ್ಯಾಜ್ಯ ನಿರ್ವಹಣೆಯನ್ನು ನಿರ್ವಹಿಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ತಿಳಿಸಿದರು. ವಿಷಯ ತಜ್ಞ ವಿಕ್ರಂ ಬೆಂಗಳೂರು, ವಿನಾಯಕ ಹಾಗೂ ಅನ್ನಪೂರ್ಣೇಶ್ವರಿ ಫೌಂಡೇಶನ್ ನ ಅಧ್ಯಕ್ಷೆ ಸೌಮ್ಯ ಜೆ.ಜೆ. ಮಾಹಿತಿ ನೀಡಿದರು.

ಪ್ರೇರಣ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಿನುತಾ ರಜತ್ ಗೌಡ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಮಾಜಿ ಅಧ್ಯಕ್ಷ ಪುಷ್ಪಾವತಿ ಆರ್. ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅನ್ನಪೂರ್ಣೇಶ್ವರಿ ಫೌಂಡೇಶನ್ ವಿನಾಯಕ ಅವರು ನಿರೂಪಿಸಿ, ಧನ್ಯವಾದ ಸಮರ್ಪಿಸಿದರು.