ಬೆಳ್ತಂಗಡಿ: ರಾಜ್ಯದಲ್ಲಿ ಬಹುದೊಡ್ಡ ಸಂಚಲನಕ್ಕೆ ಕಾರಣವಾಗಿದ್ದ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಬೆಳ್ತಂಗಡಿಯ ಹೆಚ್ಚುವರಿ ಸಿ.ಜೆ. ಮತ್ತು ಜೆ. ಎಂ. ಎಫ್. ಸಿ. ನ್ಯಾಯಾಧೀಶರಾಗಿರುವ ವಿಜಯೇಂದ್ರ ಟಿ.ಎಚ್. ಅವರು ಸೆ.16ರಂದು ನೀಡಿದ ಆದೇಶದಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಳಿಸಿ, ಆದೇಶಿಸಿದ್ದಾರೆ. ಆರೋಪಿ ಚಿನ್ನಯ್ಯ ಪರ ಡಿಫೆನ್ಸ್ ಕೌನ್ಸಿಲ್ ನ ಮೂವರು ವಕೀಲರು ವಾದಿಸಿದ್ರೆ, ಎಸ್ಐಟಿ ಪರ ಸರಕಾರಿ ವಕೀಲ ದಿವ್ಯರಾಜ್ ಹೆಗ್ಡೆ ವಾದಿಸಿದರು.