ನಿಟ್ಟಡೆ: ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ನಿಟ್ಟಡೆ ಸ.ಉ.ಪ್ರಾ. ಶಾಲೆಯ ಸಂಯುಕ್ತ ಆಶ್ರಯದಲ್ಲಿ ಸೆ. 15ರಂದು ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ 14ರ ವಯೋಮಾನದ ಬಾಲಕ /ಬಾಲಕಿಯರ ಖೋ-ಖೋ ಪಂದ್ಯಾಟ ನಡೆಯಿತು. ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳಲ್ಲಿ ಮಾನಸಿಕ ದೃಢತೆಯನ್ನು ಕಾಪಾಡಿಕೊಳ್ಳಲು ಖೋ-ಖೋ ಪಂದ್ಯಾಟ ಅತಿ ಪ್ರಾಮುಖ್ಯವಾದ ಪಾತ್ರವಹಿಸಿದೆ, ದೇಹ ಮತ್ತು ಮನಸಿಗೆ ಸಂಬಂಧಿಸಿದ ಪ್ರಸಿದ್ಧ ಆಟವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಮಹಮದ್ ಅಶ್ರಫ್ ನಮ್ಮ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಲ್ಲಿ ಮಾನಸಿಕ, ದೈಹಿಕ ಮತ್ತು ಸರ್ವಾಂಗಿನ ಬೆಳವಣಿಗೆಗೆ ನಮ್ಮ ಶಾಲೆಯು ಇಂತಹ ಕಾರ್ಯಕ್ರಮಗಳು ಹಮ್ಮಿಕೊಳ್ಳುವುದು ಒಳಿತು ಎಂದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯರಾದ ಜನಾರ್ದನ ಪೂಜಾರಿ, ಗುಣವತಿ ಭಾಗವಹಿಸಿದ್ದರು.

ಬೆಳ್ತಂಗಡಿ ತಾಲೂಕು ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಕುಂಡದಬೆಟ್ಟು ಜುಮ್ಮಾ ಮಸೀದಿ ಧರ್ಮ ಗುರುಗಳು ಬೆಳೆಯುವ ಸಿರಿ ಮೊಳಕೆಯಲ್ಲಿಯೇ ಎನ್ನುವಂತೆ ಹಲವಾರು ಹಂತಗಳಲ್ಲಿ ಕ್ರೀಡಾಪಟುಗಳನ್ನು ಗುರುತಿಸುವ ಕೆಲಸವನ್ನು ಇಲಾಖೆಯೂ ನಡೆಸುತ್ತಿದೆ ಅವರಿಗೆ ಅವಕಾಶವನ್ನು ಪ್ರೇರಣೆಯನ್ನು ನೀಡುತ್ತದೆ ಎಂದು ಶುಭ ಹಾರೈಸಿದರು. ಬೆಳ್ತಂಗಡಿ ತಾಲೂಕು ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರಿವೀಕ್ಷಕಿ ಸುಜಯ ಪ್ರಾಸ್ತಾವಿಕ ನುಡಿಗಳೊಂದಿಗೆ ಇಲಾಖೆಯ ನಿಯಮವನ್ನು ತಿಳಿಸಿದರು. ಮಕ್ಕಳ ಪ್ರತಿಭೆ ಅನಾವರಣಕ್ಕೆ ಸ್ಪರ್ಧೆಗಳು ಅಗತ್ಯ ಎಂದರು.

ಮಾಜಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶೇಖರ್ ಕುಕ್ಕೆಡಿ ಶುಭ ಹಾರೈಸಿದರು. ಅತಿಥಿಗಳಾಗಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಭರತ್, ದೈಹಿಕ ಶಿಕ್ಷಣ ಶಿಕ್ಷಕರ ಜಿಲ್ಲಾ ಸಂಘದ ಗ್ರೇಡ್ 2 ಅಧ್ಯಕ್ಷ ರವಿರಾಜ್ ಗೌಡ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಗ್ರೇಡ್ 1 ಅಧ್ಯಕ್ಷ ಸುಭಾಷ್ ಮಚ್ಚಿನ, ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ಕೊಯ್ಯೂರು, ಪ್ರಾಥಮಿಕ ಶಾಲೆ ವಲಯದ ನೋಡಲ್ ಪುಷ್ಪ, ಪ್ರೌಢಶಾಲಾ ವಲಯದ ನೋಡಲ್ ರಾಜೇಂದ್ರ ಬಲ್ಲಾಳ್, ಸ್ಥಳೀಯ ದಾನಿಗಳು ನಾರಾಯಣ ಪೂಜಾರಿ, ಎಸ್.ಡಿ.ಎಂ.ಸಿ ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರುಗಳು, ತಾಯಂದಿರ ಸಮಿತಿಯ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.
ನಿಟ್ಟಡೆ ಸ.ಉ.ಪ್ರಾ. ಶಾಲೆಯ ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಶಾಲೆಯ ಶಿಕ್ಷಕ ವೃಂದದವರು ಸಹಕರಿಸಿದರು. ಪ್ರಭಾರ ಮುಖ್ಯೋಪಾಧ್ಯಾಯನಿ ಆರತಿ ಸ್ವಾಗತಿಸಿದರು. ಶಿಕ್ಷಕಿ ಸ್ಮಿತಾ ನಿರೂಪಿಸಿದರು. ಶಿಕ್ಷಕ ಗಣೇಶ್ ವಂದಿಸಿದರು.