ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯಿಂದ ಕೊಕ್ಕಡ ಗ್ರಾಮದ ಬೂತ್ ಪ್ರಗತಿ ಸಭೆಯು ಪುದುವೆಟ್ಟು ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಬೂತ್ ಮಟ್ಟದಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಕಾರ್ಯಕ್ರಮಗಳನ್ನು ನಡೆಸುವುದು ಮತ್ತು ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸ್ಪಂದಿಸುವ ಬಗ್ಗೆ ಮಾಹಿತಿಯನ್ನು ನೀಡಿದರು.

ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ ಗೌಡ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಬೆಳ್ತಂಗಡಿ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ನಮಿತಾ ಪೂಜಾರಿ, ಗ್ರಾಮೀಣ ಘಟಕದ ಪಂಚಾಯತ್ ರಾಜ್ ಘಟಕದ ಅಧ್ಯಕ್ಷ ರಾಯ್ ಪುದುವಟ್ಟು, ಬೆಳ್ತಂಗಡಿ ತಾಲೂಕು ಭೂ ನ್ಯಾಯ ಮಂಡಳಿಯ ಸದಸ್ಯ ಬೊಮ್ಮಣ್ಣ ಗೌಡ, ಗ್ರಾಮ ಸಮಿತಿ ಅಧ್ಯಕ್ಷ ಸಂತೋಷ್ ಕೆ.ಸಿ., ಗ್ರಾಮೀಣ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ನಾರಾಯಣ ಗೌಡ, ಗ್ರಾಮೀಣ ಇಂಟಕ್ ಘಟಕದ ಅಧ್ಯಕ್ಷ ಅಶ್ರಫ್ ನೆರಿಯ ಹಾಗೂ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು, ಸದಸ್ಯರು, ಪಕ್ಷದ ಗ್ರಾಮ ಸಮಿತಿ ಬೂತ್ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.