Site icon Suddi Belthangady

ನೇತ್ರಾವತಿ ನದಿ ಸ್ವಚ್ಛತೆ ಮಾಡುವ ಮೂಲಕ ತಾಲೂಕು ಮಟ್ಟದ ಸ್ವಚ್ಛತಾ ಹೀ ಸೇವಾ – ಸ್ವಚ್ಛತೆಯೇ ಸೇವೆ ಪಾಕ್ಷಿಕ 2025 ಅಭಿಯಾನಕ್ಕೆ ಚಾಲನೆ

ಧರ್ಮಸ್ಥಳ: ರಾಜ್ಯದ ಎಲ್ಲಾ ಗ್ರಾಮಗಳಲ್ಲಿ 2025 ಸೆ. 17ರಿಂದ ಅ. 2ರವರೆಗೆ ಸರಕಾರದ ಸುತ್ತೋಲೆಯಂತೆ ಸ್ವಚ್ಛತಾ ಹೀ ಸೇವಾ ಸ್ವಚ್ಛತೆಯ ಸೇವೆ ಅಭಿಯಾನವನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ಧರ್ಮಸ್ಥಳ ಗ್ರಾಮ್ ಪಂಚಾಯತ್ ಸಹಭಾಗಿತ್ವದಲ್ಲಿ, ಬೆಳ್ತಂಗಡಿ ತಾಲೂಕು ಮಟ್ಟದ ಅಭಿಯಾನವನ್ನು ಧರ್ಮಸ್ಥಳ ಗ್ರಾಮ್ ಪಂಚಾಯತ್ ವ್ಯಾಪ್ತಿಯ ನೇತ್ರಾವತಿ ಸ್ನಾನಘಟ್ಟ ನದಿ ಬದಿಯಲ್ಲಿ ಸ್ವಚ್ಛತೆ ಮಾಡುವ ಮೂಲಕ ಚಾಲನೆ ನೀಡಲಾಯಿತು.

ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಮಹತ್ವವನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ ಬೆಳ್ತಂಗಡಿ ತಾಲೂಕು ಪಂಚಾಯತ್ ವ್ಯವಸ್ಥಾಪಕ ಪ್ರಶಾಂತ್ ತಿಳಿಸಿದರು. ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪಿ. ಶ್ರೀನಿವಾಸ್ ರಾವ್ ಮಾತನಾಡಿ ಧರ್ಮಸ್ಥಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತಾಲೂಕು ಮಟ್ಟದ ಸ್ವಚ್ಛತಾ ಕಾರ್ಯಕ್ರಮವನ್ನು ಚಾಲನೆ ನೀಡಿರುವುದು ತುಂಬಾ ಅರ್ಥಪೂರ್ಣವಾಗಿದೆ. ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾವಿರಾರು ಭಕ್ತರು ಬರುವ ಧಾರ್ಮಿಕ ಕೇಂದ್ರವಾದ ಕಾರಣ ನಿರಂತರ ಸ್ವಚ್ಛತೆಯನ್ನು ಕಾಪಾಡಿಕೊಂಡು ಬರುವುದು ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ದೊಡ್ಡ ಸವಾಲು ಆಗಿರುತ್ತದೆ.

ಈ ಒಂದು ವ್ಯವಸ್ಥೆಯನ್ನು ಮಾಡುತ್ತ ಬರುತ್ತಿರುವ ಸ್ವಚ್ಛತಾ ಕಾರ್ಮಿಕರಿಗೆ ಅಭಿನಂದನೆ ಸಲ್ಲಿಸಿದರು ಹಾಗೂ ಸ್ವಚ್ಛತಾ ಪ್ರತಿಜ್ಞೆಯನ್ನು ಬೋಧಿಸಿದರು. ಸದರಿ ಕಾರ್ಯಕ್ರಮದಲ್ಲಿ ಸ್ವಚ್ಛತಾ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲಾ ನದಿಬದಿ ಸ್ವಚ್ಛತೆ ಮಾಡುವ ಮೂಲಕ ತಾಲೂಕು ಮಟ್ಟದ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಗ್ರಾಮ ಪಂಚಾಯತಿ ಸದಸ್ಯ ರಾಮಚಂದ್ರರಾವ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ., ಲೆಕ್ಕ ಸಹಾಯಕಿ ಪ್ರಮೀಳಾ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ, ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರು, ಆಟೋ ವಾಹನ ಚಾಲಕ ಮಾಲಕ ಸಂಘದ ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಸಿಬ್ಬಂದಿ ವರ್ಗ, ಗ್ರಾಮಸ್ಥರು ಉಪಸ್ಥಿತರಿದ್ದರು.

Exit mobile version