ಮಿತ್ತಬಾಗಿಲು: ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ವಿನಯಚಂದ್ರ ಅವರ ಅಧ್ಯಕ್ಷತೆಯಲ್ಲಿ ಸೆ.18ರಂದು ಮಿತ್ತಬಾಗಿಲು ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಮಾರ್ಗದರ್ಶಕ ಅಧಿಕಾರಿಯಾಗಿ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಅಭಿವೃದ್ಧಿ ಅಧಿಕಾರಿ ಲಕ್ಷ್ಮಿ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.
ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.