Site icon Suddi Belthangady

ಕೊಯ್ಯೂರು: ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಕೊಯ್ಯೂರು: “ಶಿಕ್ಷಕರು ಶಾಲೆಯಲ್ಲಿ ಮಾತ್ರವಲ್ಲದೇ ಸಮಾಜದಲ್ಲಿ ಬೆರೆತಾಗ ಜನಮಾನಸದಲ್ಲಿ ಉಳಿಯುತ್ತಾರೆ. ಶಿಕ್ಷಕರಿಗೆ ಗೌರವ ಸಿಗುವುದು ಅವರ ಪಾಂಡಿತ್ಯದಿಂದಲ್ಲ. ಬದಲಾಗಿ ಅವರ ವ್ಯಕ್ತಿತ್ವದಿಂದಾಗಿ ” ಎಂದು ನಿವೃತ್ತ ಮುಖ್ಯ ಶಿಕ್ಷಕ ಧರ್ಣಪ್ಪ ಗೌಡ ಹಲೆಕ್ಕಿ ಅಭಿಪ್ರಾಯ ಪಟ್ಟರು. ಅವರು ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಇನ್ನೋರ್ವ ಮುಖ್ಯ ಅತಿಥಿ ಮಾಜಿ ಯೋಧ ಹಾಗೂ ನಿವೃತ್ತ ಉಪನ್ಯಾಸಕ ಹರೀಶ್ ರೈ “ಶಿಕ್ಷಕರು, ಮಕ್ಕಳ ಅಭಿರುಚಿಗೆ ತಕ್ಕಂತೆ ಅವರಿಗೆ ಮಾರ್ಗದರ್ಶನ ನೀಡಬೇಕು. ಸೇನೆ, ವೈದ್ಯ, ಶಿಕ್ಷಕ, ಕೃಷಿಕ -ಇಂತಹ ಯಾವುದೇ ಸೇವೆಯಲ್ಲಿ ತೊಡಗಿಕೊಂಡಾಗ ದೇಶದ ಹಿತ ಕಾಯುವ ಕೆಲಸ ಮಾಡಬೇಕು ” ಎಂದು ವಿದ್ಯಾರ್ಥಿಗಳಿಗೆ ಕರೆನೀಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೊಯ್ಯೂರು ಸರ್ಕಾರಿ ಪ್ರೌಢ ಶಾಲೆಯ ಹಿಂದಿ ಶಿಕ್ಷಕ ಸುಧಾಕರ ಶೆಟ್ಟಿ ವಿದ್ಯಾರ್ಥಿಗಳಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯ ಕೋರಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ಲೋಕೇಶ್ ಪಾoಬೇಲು, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ದಾಮೋದರ ಗೌಡ ಬೆರ್ಕೆ, ಪ್ರಾಚ್ಯ ವಸ್ತು ಸಂಗ್ರಾಹಕ ಹಳ್ಳಿ ಮನೆ ಹೈದರಾಲಿ ಮತ್ತು ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು. ಪ್ರಾಚಾರ್ಯ ಮೋಹನ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯ ಶಿಕ್ಷಕ ಧರ್ಣಪ್ಪ ಗೌಡ ಹಲೆಕ್ಕಿ ಮತ್ತು ನಿವೃತ್ತ ಉಪನ್ಯಾಸಕ ಹರೀಶ್ ರೈ ಉಜಿರೆ ಅವರು ಕಾಲೇಜಿನಿಂದ ಅಭಿನಂದಿಸಲಾಯಿತು.

ಮಾಜಿ ರಾಷ್ಟ್ರಪತಿ ದಿ| ರಾಧಾ ಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಕಾರ್ಯಕ್ರಮ ಪ್ರಾರಂಭಿಸಲಾಯಿತು. ಉಪನ್ಯಾಸಕರಿಗಾಗಿ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆ ಗಳನ್ನು ನಡೆಸಿದ್ದು ಬಹುಮಾನಗಳನ್ನು ವಿತರಿಸಲಾಯಿತು. ವಿದ್ಯಾರ್ಥಿನಿಯರಾದ ವಿದ್ಯಾ, ವಿನಯ, ಐಶ್ವರ್ಯ, ಸಹಲಾ, ಚಿರಸ್ವಿ ಪ್ರಾರ್ಥನೆಗೈದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ರಂಜಿತ್ ಶಿಕ್ಷಕರ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು. ವಿದ್ಯಾರ್ಥಿನಿ ರಶ್ಮಿತಾ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿ ಸ್ವರೂನ್ ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಅಂಕಿತ ಮತ್ತು ದಿವ್ಯ ಅಭಿನಂದನಾ ಪತ್ರ ವಾಚಿಸಿದರು. ವಿದ್ಯಾರ್ಥಿನಿಯರಾದ ವಿನಯ, ವಂಶಿಕ, ಸೌಜನ್ಯ ಕಾರ್ಯಕ್ರಮ ನಿರ್ವಹಣೆಗೈದರು. ವಿದ್ಯಾರ್ಥಿ ರಮೀಜ್ ವಂದಿಸಿದರು.

Exit mobile version