ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬೆಳಾಲು ಉಮಾನಾಥ ಕೋಟ್ಯಾನ್ ರಿಗೆ ನುಡಿನಮನ

0

ಬೆಳ್ತಂಗಡಿ: ಇತ್ತೀಚಿಗೆ ನಿಧನರಾದ ಯುವವಾಹಿನಿ ಬೆಳ್ತಂಗಡಿ ಘಟಕದ ಸಲಹೆಗಾರ ಉಮನಾಥ ಕೋಟ್ಯಾನ್ ಬೆಳಾಲು ಅವರಿಗೆ ನುಡಿನಮನ ಕಾರ್ಯಕ್ರಮವನ್ನು ಘಟಕದಿಂದ ನಡೆಸಿ ಅವರಿಗೆ ಗೌರವ ಸಲ್ಲಿಸಲಾಯಿತು. ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಉಮಾನಾಥ್ ಕೋಟ್ಯಾನ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರೊಂದಿಗಿನ ಒಡನಾಟದ ಬಗ್ಗೆ ಹಾಗೂ ಸಂಘಟನೆಯ ಯಶಸ್ಸಿನ ಹಿಂದೆ ಇದ್ದ ಅವರ ಕೊಡುಗೆಯನ್ನು ಸ್ಮರಿಸಿದರು. ಘಟಕದ ಸ್ಥಾಪಕಧ್ಯಕ್ಷ ರಾಕೇಶ್ ಕುಮಾರ್ ಮೂಡುಕೋಡಿ, ಮಾಜಿ ಅಧ್ಯಕ್ಷರಾದ ಎಂ. ಕೆ. ಪ್ರಸಾದ್, ಅಶ್ವಥ್ ಕುಮಾರ್, ಸದಾಶಿವ ಪೂಜಾರಿ ಊರ, ಪ್ರಶಾಂತ್ ಮಚ್ಚಿನ ನುಡಿ ನಮನ ಸಲ್ಲಿಸಿದರು.

ಘಟಕದ ಕಾರ್ಯದರ್ಶಿ ಮಧುರ ರಾಘವ್, ಕೋಶಾಧಿಕಾರಿ ನಾಗೇಶ್ ಆದೆಲು, ಮಹಿಳಾ ಸಂಚಾಲನ ಸಮಿತಿ ಪ್ರಧಾನ ಸಂಚಾಲಕಿ ಲೀಲಾವತಿ ಪಣಕಜೆ, ಘಟಕದ ನಿರ್ದೇಶಕರುಗಳು, ಪದಾಧಿಕಾರಿಗಳು ಸಂಘಟನಾ ಕಾರ್ಯದರ್ಶಿ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಒಂದು ನಿಮಿಷ ಮೌನ ಪ್ರಾರ್ಥನೆ ಮಾಡಿ, ಸದಸ್ಯರೆಲ್ಲರೂ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here