Site icon Suddi Belthangady

ಅಕ್ರಮ ಬಂದೂಕು ದಾಸ್ತಾನು ಪ್ರಕರಣ-ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ನೋಟಿಸ್ ಅಂಟಿಸಿ ಬಂದ ಪೊಲೀಸರು

ಉಜಿರೆ: ಅಕ್ರಮವಾಗಿ ಮನೆಯಲ್ಲಿ ಎರಡು ತಲವಾರು ಮತ್ತು ಒಂದು ಬಂದೂಕು ದಾಸ್ತಾನು ಮಾಡಿಟ್ಟ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ತಿಮರೋಡಿ ಮನೆಗೆ ತೆರಳಿ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಅಂಟಿಸಿ ಬಂದಿದ್ದಾರೆ. ಎಸ್.ಐ.ಟಿ ಶೋಧದ ವೇಳೆ ಪತ್ತೆಯಾದ ಅಕ್ರಮ ಮಾರಕಾಸ್ತ್ರಗಳ ಬಗ್ಗೆ ಸೆ.16 ರಂದು ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು.
ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಸೆ.18 ರಂದು ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಮಹಜರು ನಡೆಸಲು ತೆರಳಿದ್ದರು.

ಈ ವೇಳೆ ಮನೆಯಲ್ಲಿ ಇಲ್ಲದ ಕಾರಣ ಮತ್ತೆ ಮರುದಿನ ಮನೆಗೆ ಸೆ.19 ರಂದು ಬೆಳಗ್ಗೆ 6 ಗಂಟೆಗೆ ಬೆಳ್ತಂಗಡಿ ಪೊಲೀಸರು ಹೋದಾಗ ಪ್ರಕರಣದ ಗಂಭೀರತೆ ಅರಿತು ತಿಮರೋಡಿ ತಲೆಮೆರೆಸಿಕೊಂಡಿದ್ದಾರೆ ಎನ್ನಲಾಗಿದೆ. ತಿಮರೋಡಿ ಮನೆಯಲ್ಲಿ ಇರದ ಕಾರಣ ವಿಚಾರಣೆಗೆ ಸೆ.21 ರಂದು ಹಾಜರಾಗಲು ತಿಮರೋಡಿ ಮನೆಯ ಗೋಡೆಗೆ ನೋಟಿಸ್ ಅಂಟಿಸಿ ಬೆಳ್ತಂಗಡಿ ಪೊಲೀಸರು ಬಂದಿದ್ದಾರೆ.

Exit mobile version