Site icon Suddi Belthangady

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜು ಕ್ಯಾಂಪಸ್‌ನಲ್ಲಿ ನಂದಿನಿ ಪಾರ್ಲರ್ ಉದ್ಘಾಟನೆ

ಗುರುವಾಯನಕೆರೆ: ಕಲ್ಯಾಣ ವಿಮೋಚನಾ ದಿನಾಚರಣೆಯ ಸಂದರ್ಭದಲ್ಲಿ ಸೆ.17ರಂದು ಕರ್ನಾಟಕ ರಾಜ್ಯಾದಂತ 500 ನಂದಿನಿ ಮಾರಾಟ ಮಳಿಗೆಗಳನ್ನು ಹೊಸದಾಗಿ ಸ್ಥಾಪಿಸಿ ವಿವಿಧ ಒಕ್ಕೂಟಗಳ ವ್ಯಾಪ್ತಿಯಲ್ಲಿ ಏಕಕಾಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆನ್‌ಲೈನ್ ಮೂಲಕ ಉದ್ಘಾಟಿಸಿದ್ದು, ಬೆಳ್ತಂಗಡಿ ತಾಲೂಕಿನ ಎಕ್ಸೆಲ್ ಪದವಿ ಪೂರ್ವ ಕಾಲೇಜು ಕ್ಯಾಂಪಸ್‌ನಲ್ಲಿ ನೂತನ ನಂದಿನಿ ಪಾರ್ಲರ್ ಗೆ ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಅವರು ಚಾಲನೆ ನೀಡಿದರು.

ಎಕ್ಸೆಲ್ ಸಮೂಹ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ ಅವರು ದೀಪ ಪ್ರಜ್ವಲಿಸಿ ನಂದಿನಿ ಗುಣಪಟ್ಟದ ಉತ್ಪನ್ನಗಳನ್ನು ನೀಡುತ್ತಿದ್ದು ನಂಬಿಕೆಯ ಸಂಸ್ಥೆಯಾಗಿದೆ ಎಂದರು. ನಿರ್ದೇಶಕರಾದ ಸುಚರಿತ ಶೆಟ್ಟಿ, ಎಚ್. ಪ್ರಭಾಕರ್, ಮಮತಾ ಆರ್. ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ., ಮಾರುಕಟ್ಟೆ ಸುವ್ಯವಸ್ಥಾಪಕರಾ ಸಚಿನ್ಸಿ., ಕಾಲೇಜು ಪ್ರಾಂಶುಪಾಲ ಡಾ. ಪ್ರಜ್ವಲ್ ಉಪಸ್ಥಿತರಿದ್ದರು.

Exit mobile version