ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಆಡಳಿತಕ್ಕೊಳಪಟ್ಟ ಕೆ.ಜಿ.ಯಿಂದ ಪಿ.ಜಿ.ವರೆಗಿನ ಹಾಗೂ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಬೃಹತ್ ಸಮಾವೇಶ ಸೆ. 21ರಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆಯಲಿದೆ. ಹಿರಿಯ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಮಧ್ಯೆ ಮಧುರ ಬಾಂಧವ್ಯ ಭದ್ರಗೊಳಿಸುವುದರೊಂದಿಗೆ ಭವಿಷ್ಯದ ಸೇವಾಕಾರ್ಯಗಳಿಗೆ ಸಮಾವೇಶ ಪ್ರೇರಕವಾಗಲಿದೆ. ಶಿಕ್ಷಣ ಸಂಸ್ಥೆಗಳ ಪ್ರಗತಿಯ ಸಿಂಹಾವಲೋಕನ, ಹಿರಿಯ ವಿದ್ಯಾರ್ಥಿಗಳ ಅನುಭವ, ಅನಿಸಿಕೆ ಹಂಚಿಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿ ಮಾರ್ಗದರ್ಶನ ನೀಡಲಿದ್ದಾರೆ.
ಸೆ.21: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಬೃಹತ್ ಸಮಾವೇಶ
