ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಯೋಜಿಸಿರುವ 2025ನೇ ಸಾಲಿನ ಸೆ. 14ರಿಂದ 21ರವರೆಗೆ ನಡೆಯಲಿರುವ 27ನೇ ವರ್ಷದ ಭಜನಾ ತರಬೇತಿ ಕಮ್ಮಟದ 6ನೇ ದಿನದ ಕಾರ್ಯಾಗಾರಕ್ಕೆ ಹೆಗ್ಗಡೆಯವರು ಭೇಟಿ ನೀಡಿ ಭಜನೆ ಮಾಡುವ ಮುನ್ನ ಮಾನಸಿಕ ತಯಾರಿ ಮತ್ತು ದೈಹಿಕ ಸದೃಡತೆ ಮುಖ್ಯ ಏಕಾಗ್ರತೆ ಮತ್ತು ಚಿತ್ತ ಮನಸ್ಸಿನಿಂದ ಭಜನೆ ಅಭ್ಯಾಸ ಮಾಡಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಭಜಕರಿಗೆ ಶುಭಕೋರಿದರು.
ಡಾ. ಹೇಮಾವತಿ ವಿ. ಹೆಗ್ಗಡೆಯವರು ಉಪಸ್ಥಿತರಿದ್ದು ಭಜಕರಿಗೆ ಶುಭ ಹಾರೈಸಿದರು. ಭಜನಾ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್, ಕಾರ್ಯದರ್ಶಿ ಎ.ವಿ. ಶೆಟ್ಟಿ, ಬಜನಾ ಪರಿಷತ್ ಅಧ್ಯಕ್ಷ ಚಂದ್ರಶೇಖರ ಸಾಲ್ಯಾನ್, ಉಪಾಧ್ಯಕ್ಷ ರಾಜೇಂದ್ರ ಕುಮಾರ್, ಬನ್ನೂರು, ಕೋಶಾಧಿಕಾರಿ ಪದ್ಮರಾಜ್ ಜೈನ್, ಭಜನಾ ಕಮ್ಮಟ ಸಮನ್ವಯಾಧಿಕಾರಿಗಳಾದ ಸಂತೋಷ್ ಪಿ.. ಅಳಿಯೂರು ಹಾಗೂ ರವೀಂದ್ರ ಅವರು ಕರ್ತವ್ಯ ನಿರ್ವಹಿಸಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಾಥಮಿಕ ಶಾಲೆಯ ಅಧ್ಯಾಪಕ ನಿಶಾಂತ್ ಕಾರ್ಯಕ್ರಮ ನಿರ್ವಹಿಸಿದರು.