ಪದ್ಮುಂಜ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಸುಮಾರು 18 ಸಾವಿರ ರೂಪಾಯಿ ವೆಚ್ಚದ ಪ್ರಿಂಟಿಂಗ್ ಯಂತ್ರವನ್ನು ಸೆ. 19ರಂದು ಕೊಡುಗೆಯಾಗಿ ನೀಡಲಾಯಿತು.

ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಪುರುಷೋತ್ತಮ ಗೌಡ, ಉಪಾಧ್ಯಕ್ಷ ಉಮೇಶ್ ಗೌಡ, ನಿರ್ದೇಶಕ ಕಾರ್ಯದರ್ಶಿ, ಸತೀಶ್ ಶೆಟ್ಟಿ ಮುಗೆರೋಡಿ, ಸಿಬ್ಬಂದಿ ವರ್ಗ ಹಾಗೂ ಎಸ್. ಡಿ. ಎಂ. ಸಿ ಅಧ್ಯಕ್ಷರು, ಸದಸ್ಯರು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಕೀರ್ತಿ ಅವರು ಸ್ವಾಗತಿಸಿ, ಪ್ರಿಂಟರ್ ಯಂತ್ರ ಕೊಡುಗೆ ನೀಡಿದ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ನಿರ್ದೇಶಕರುಗಳಿಗೆ ಅಭಿನಂದನೆ ಸಲ್ಲಿಸಿದರು.