ಪಡಂಗಡಿ: ಗ್ರಾಮ ಪಂಚಾಯತಿನ 2025- 26ನೇ ಸಾಲಿನ ಮೊದಲ ಗ್ರಾಮ ಸಭೆಯು ಸೆ. 20ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜೇಂದ್ರ ಪ್ರಸಾದ್ ಸಭೆಯನ್ನು ಮುನ್ನಡೆಸಿದರು. ಪಂಚಾಯತ್ ಉಪಾಧ್ಯಕ್ಷೆ ವಸಂತಿ, ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯ ಸಂತೋಷ ಕುಮಾರ್, ಮಾಜಿ ಅಧ್ಯಕ್ಷೆ ಹಾಲಿ ಸದಸ್ಯೆ ಮೀನಾಕ್ಷಿ, ಮಾಜಿ ಉಪಾಧ್ಯಕ್ಷೆ ಹಾಲಿ ಸದಸ್ಯೆ ಕವಿತಾ, ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.
ಸಭೆ ಪ್ರಾರಂಭದಲ್ಲಿ ಇತ್ತೀಚೆಗೆ ನಿಧನರಾದ ಪಂಚಾಯತ್ ಸದಸ್ಯ ಹಾಮದ್ ಬಾವ ಇವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು. ಅಂಗನವಾಡಿ ಕಾರ್ಯಕರ್ತೆ ಪ್ರೇಮ, ನಿವೃತ್ತಿಗೊಳ್ಳಲಿರುವ ಆಶಾ ಕಾರ್ಯಕರ್ತೆ ಚಿನ್ನಮ್ಮ ಅವರನ್ನು ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡಂಗಡಿ ಸ. ಪ್ರೌಢ ಶಾಲೆಯಲ್ಲಿ ಪ್ರಥಮ ಸ್ಥಾನ ಪಡೆದ ಲಿಖಿತ, ದ್ವಿತೀಯ ಸ್ಥಾನ ಪಡೆದ ಸುಶಾಂತ್ ಅವರನ್ನು ಹಾಗೂ ಪ್ರೌಢ ಶಾಲಾ ಶಿಕ್ಷಕರನ್ನು ಪಂಚಾಯತ್ ವತಿಯಿಂದ ಸನ್ಮಾನಿಸಲಾಯಿತು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಫನಾ ಸ್ವಾಗತಿಸಿದರು. ಕಾರ್ಯದರ್ಶಿ ಗಣೇಶ್ ಅನುಪಾಲನಾ ವರದಿ ವಾಚಿಸಿಸಿದರು. ಸಿಬ್ಬಂದಿ ಸುನಿಲ್, ಮತ್ತು ದಿವ್ಯ ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆ ವಿವರ ನೀಡಿದರು. ಇತರ ಸಿಬ್ಬಂದಿಗಳು ಸಹಕರಿಸಿದರು.