ಬೆಳ್ತಂಗಡಿ: ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್, ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ 2025-26ನೇ ಸಾಲಿನ ಭಿತ್ತಿ ಪತ್ರಿಕೆ ಅನಾವರಣ ಕಾರ್ಯಕ್ರಮವನ್ನು ಶ್ರೀ ಗುರುದೇವ ಎಜುಕೇಶನ್ ಟ್ರಸ್ಟ್ ಅಧ್ಯಕ್ಷೆ ಪ್ರೀತಿತ ಧರ್ಮವಿಜೇತ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ಕನ್ನಡ ಭಾಷಾ ಉಪನ್ಯಾಸಕ ಗಣೇಶ್ ಶಿರ್ಲಾಲ್ ಬಿತ್ತಿ ಪತ್ರಿಕೆ ಸೂರ್ಯಕಾಂತಿಯನ್ನು ಉದ್ಘಾಟಿಸಿದರು.
ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ. ಸವಿತಾ, ವಾಣಿಜ್ಯಶಾಸ್ತ್ರ ಮುಖ್ಯಸ್ಥ ಶಮಿವುಲ್ಲಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಸೌಮ್ಯ ಸ್ವಾಗತಿಸಿ, ತೃತೀಯ ಬಿಕಾಂ ಮಾಷಿತಾ ಕಾರ್ಯಕ್ರಮ ನಿರೂಪಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಪ್ರದ್ವಿತ ಜೈನ್ ವಂದಿಸಿದರು.