ಶಿಬರಾಜೆ: ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಪರಪ್ಪು ವತಿಯಿಂದ ಸೆ.20ರಂದು ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭಜನಾ ತರಬೇತಿ ಪಡೆದ ಮಹಿಳಾ ಸದಸ್ಯರಿಗೆ ಸಮವಸ್ತ್ರಗಳನ್ನು ವಿತರಿಸಲಾಯಿತು.
ಈ ಕಾರ್ಯಕ್ರಮವನ್ನು ಕಿರಣ್ ಚಂದ್ರ ಡಿ ಪುಷ್ಪಗಿರಿ ಮತ್ತು ಜಿತೇಂದ್ರ ಜೈನ್ ಪರಪ್ಪು ಅವರ ದಾನದ ಸಹಾಯದಿಂದ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಭಜನಾ ಮಂಡಳಿಯ ಅಧ್ಯಕ್ಷ ದಿನೇಶ್ ಗೌಡ ಉಪಸ್ಥಿತರಿದ್ದರು. ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಧನಂಜಯ ಗೌಡ ಮುಖ್ಯ ಅತಿಥಿಯಾಗಿ ಮಾತನಾಡಿ, “ಭಜನೆಯಂತಹ ಸಾಂಸ್ಕೃತಿಕ ಚಟುವಟಿಕೆಗಳಿಂದ ಸಂಸ್ಕೃತಿಯ ರಕ್ಷಣೆ ಸಾಧ್ಯ. ಮಕ್ಕಳು ನೃತ್ಯ ಮಾಡುವ ರೀತಿಯು ತುಂಬಾ ಸಂತೋಷವನ್ನು ಕೊಟ್ಟಿದೆ,” ಎಂದು ಅಭಿಪ್ರಾಯಪಟ್ಟರು.
ಬಿ.ಎಂ. ಸಂಜೀವ ದೇವಾಡಿಗ, ತಿಮ್ಮಪ್ಪ ರೈ ಶೇಡಿ ಸೇರಿದಂತೆ ವಿವಿಧ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಊರಿನ ನಿವಾಸಿಗಳು, ಭಜನಾ ತರಬೇತಿ ಪಡೆದ ವಿದ್ಯಾರ್ಥಿಗಳು, ಮಹಿಳೆಯರು, ಪುರುಷರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರುಗು ನೀಡಿದರು.
ಅಂಕಿತ ಸ್ವಾಗತಿಸಿದರು. ವೇದಿಕ ಅತಿಥಿಗಳನ್ನು ಪರಿಚಯಿಸಿದರು ಹಾಗೂ ಗಂಗಾಧರ ಗೌಡ ಕಾರ್ಯಕ್ರಮ ನಿರೂಪಿಸಿದರು. ನಿತೇಶ್ ಗೌಡ ಧನ್ಯವಾದ ವ್ಯಕ್ತಪಡಿಸಿದರು.