ರೆಖ್ಯ: ರಾಷ್ಟ್ರೀಯ ಹೆದ್ದಾರಿ 75ರ ಪರಕ್ಕಳ ಎಂಬಲ್ಲಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿಯಾಗಿದ್ದು ಚಾಲಕ ಮತ್ತು ನಿರ್ವಾಹಕ ರಿಬ್ಬರಿಗೂ ಗಾಯಗಳಾಗಿದೆ. ತಕ್ಷಣ ಅವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ಸಂಭವಿಸಿದ ಸಂಧರ್ಭದಲ್ಲಿ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳು ಮತ್ತು ಸ್ಥಳೀಯರು ಗಾಯಳುಗಳನ್ನು ಮೇಲಕ್ಕೆತ್ತಲು ಸಹಾಯ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ತಿರುವಿನಲ್ಲಿ ಕಳೆದ ಕೆಲ ದಿನಗಳಿಂದ 25ಕ್ಕೂ ಹೆಚ್ಚಿನ ಅಪಘಾತ ಸಂಭವಿಸುರುವುದಾಗಿ ಸ್ಥಳೀಯರು ಸುದ್ದಿ ನ್ಯೂಸ್ ಗೆ ತಿಳಿಸಿದ್ದಾರೆ.