Site icon Suddi Belthangady

ದ.ಕ. ಜಿಲ್ಲಾ ಕನ್ನಡ ಜಾಗೃತಿ ಸಮಿತಿಗೆ ಸದಸ್ಯರಾಗಿ ಬೆಳ್ತಂಗಡಿಯ ಹಿರಿಯ ಪತ್ರಕರ್ತ ದೇವಿಪ್ರಸಾದ್ ನೇಮಕ

ಬೆಳ್ತಂಗಡಿ: ದ.ಕ ಜಿಲ್ಲಾ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರಾಗಿ ಜೈ ಕನ್ನಡಮ್ಮ ಪತ್ರಿಕೆಯ ಸಂಪಾದಕ ದೇವಿಪ್ರಸಾದ್ ನೇಮಕಗೊಂಡಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಕ್ರಮಗಳನ್ನು ಸ್ಥಳೀಯ ಹಂತದಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸರ್ಕಾರದ ಆದೇಶದನುಸಾರ ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ದೇವಿಪ್ರಸಾದ್ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ. ಸಂತೋಷ್ ಹಾನಗಲ್ಲ ನೇಮಕಗೊಳಿಸಿದ್ದಾರೆ.

Exit mobile version