Site icon Suddi Belthangady

ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ಜಿಲ್ಲಾ ಮಟ್ಟಕ್ಕೆ

ಬೆಳ್ತಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ದಿವ್ಯಜೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತಡ್ಕ ಅವರ ಸಹಭಾಗಿತ್ವದಲ್ಲಿ ನಿಡ್ಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಶಾಲೆ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

ಸ್ಟಾರ್ ಲೈನ್ ವಿದ್ಯಾಸಂಸ್ಥೆಯ 7 ವಿದ್ಯಾರ್ಥಿಗಳು ಜಿಲ್ಲಾಮಟ್ಟದಲ್ಲಿ ಆಡುವ ಅರ್ಹತೆಯನ್ನು ಪಡೆದಿರುತ್ತಾರೆ. ಇವರಿಗೆ ಶಾಲಾ ಆಡಳಿತ ಟ್ರಸ್ಟ್, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದವು ಅಭಿನಂದನೆಯನ್ನು ಸಲ್ಲಿಸಿದೆ.

Exit mobile version