ಮುಂಡಾಜೆ: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನಕ್ಕೊಳಪಟ್ಟ ಮುಂಡಾಜೆ ಪದವಿ ಪೂರ್ವ ಕಾಲೇಜು ಹಾಗೂ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆy ಕಬ್ಸ್- ಬುಲ್ ಬುಲ್, ಸೌಟ್ಸ್- ಗೈಡ್ಸ್, ರೋವರ್ಸ್ ಮತ್ತು ರೇಂಜರ್ಸ್ ವಿಭಾಗಗಳ ಎರಡು ದಿನದ ತರಬೇತಿ ಶಿಬಿರದ ಉದ್ಘಾಟನೆಯು ಜರುಗಿತು.
ಶಿಬಿರದ ಉದ್ಘಾಟನೆಯನ್ನು ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ ನೆರವೇರಿಸಿ, ಸ್ಕೌಟಿಂಗ್ ಗೈಡಿಂಗ್ ಸಮವಸ್ತ್ರ ಹಾಗೂ ಪರೀಕ್ಷೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿನಯಚಂದ್ರ ಅವರು ಶಿಬಿರಕ್ಕೆ ಶುಭ ಹಾರೈಸಿದರು.
ಪ. ಪೂ. ಕಾಲೇಜಿನ ಪ್ರಾಂಶುಪಾಲೆ ಗೀತಾ, ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಖ್ಯಶಿಕ್ಷಕಿ ಚಂದ್ರಮತಿ, ಹಿರಿಯ ಶಿಕ್ಷಕಿ ಶ್ರೀಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ರೇಂಜರ್ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ರೇಂಜರ್ ಮೇಟ್ ಹೊಂಗಿರಣ ಸ್ವಾಗತಿಸಿ, ರೇಂಜರ್ ಶ್ರಾವ್ಯ ನಿರೂಪಿಸಿದರು. ರೇಂಜರ್ ಜಲಜಾಕ್ಷಿ ಧನ್ಯವಾದಗೈದರು.