ನಾಳ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆ. 22ರಿಂದ ಆರಂಭವಾಗುವ ಶರನ್ನವರಾತ್ರಿ ಪೂಜೆಯ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವು ಜರಗಿತು. ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಅಸ್ರಣ್ಣರು ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಬಿ. ಹರೀಶ್ ಕುಮಾರ್ ರಾಷ್ಟ್ರಪ್ರಶಸ್ತಿ ವಿಜೇತ ನಿವೃತ್ತ ಉಪ ಪ್ರಾಂಶುಪಾಲ ದಿವಾಕರ ಆಚಾರ್ಯ ಗುಡ್ಡಪ್ಪ ಗೌಡ ಬಲ್ಯ, ಸಂಜೀವ ಬಾಳಿಂಜ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವ್ಯವಸ್ಥಾಪನ ಸಮಿತಿ ಸದಸ್ಯ ರಾಘವ ಹೆಚ್ ಗೇರುಕಟ್ಟೆ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಶ್ರೀ ವಿನಾಯಕ ಯಕ್ಷಗಾನ ಮಂಡಳಿ ಬಲ್ಯ ಇವರಿಂದ ಪಾಂಡವಶ್ವಮೇಧ ಪ್ರಸಂಗದಲ್ಲಿ ಭಕ್ತ ಸುಧನ್ವ ಆಖ್ಯಾನವು ತಾಳಮದ್ದಳೆ ಪ್ರಸ್ತುತಗೊಂಡಿತು.
ನಾಳ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ
